ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಸಾಗರ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ ಮುಗಿಸಿ ವಡನಬೈಲು ಬಳೆ ಪದ್ಮಾವತಿ ದೇವಸ್ಥಾನಕ್ಕೆ ತೆರಳುವಾಗ ಬಸ್ ಬ್ರೇಕ್ ಫೇಲ್ (Break Fail) ಆಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸಾಗರ ತಾಲೂಕು ಆಡುಕಟ್ಟೆ ಸಮೀಪದ ಜೋಗಿನ ಮಠ ಬಳಿ ಬಸ್ ಬ್ರೇಕ್ ಫೇಲ್ ಆಗಿ ತಿರುವಿನಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ 18 ಪ್ರವಾಸಿಗರು ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರದ ಪ್ರವಾಸಿಗರು
ಚಿಕ್ಕಬಳ್ಳಾಪುರ ಸುಮಾರು 50 ಪ್ರವಾಸಿಗರು ಖಾಸಗಿ ಬಸ್ಸಿನಲ್ಲಿ ಸಿಗಂದೂರು, ವಡನಬೈಲು ದೇವಸ್ಥಾನಗಳಿಗೆ ಪ್ರವಾಸಕ್ಕೆ ಆಗಮಿಸಿದ್ದರು. ಇವತ್ತು ಸಿಗಂದೂರು ದರ್ಶನ ಮುಗಿಸಿ ವಡನಬೈಲಿಗೆ ತೆರಳುತ್ತಿದ್ದರು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕಾರ್ಗಲ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳಿಗೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಹೇಗಿದೆ ಡಿಮಾಂಡ್?




Break Fail

