ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಎದುರಿನಿಂದ ಬಂದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಗಿಳಾಲಗುಂಡಿ ಸಮೀಪ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬಸ್ಸು ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಆನಂದಪುರದಲ್ಲಿ ನಾಟಿ ಔಷಧಿ ಖರೀದಿಗೆ ತೆರಳುವವರು ಹೆಚ್ಚಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ ಚಾಲಕನಿಗೆ ಗಂಭೀರ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಅದೇ ಮಾರ್ಗದಲ್ಲಿ ತೆರಳುತ್ತಿದ್ದವರು ನೆರವಿಗೆ ಧಾವಿಸಿದ್ದಾರೆ.
ಇದನ್ನೂ ಓದಿ – ನಿವೃತ್ತ ಯೋಧರಿಗೆ ಅದ್ಧೂರಿ ಸ್ವಾಗತ, ಆನಂದಪುರ, ರಿಪ್ಪನ್ಪೇಟೆಯಲ್ಲಿ ಮೆರವಣಿಗೆ
ತಿರುವಿನಲ್ಲಿ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಗೂಡ್ಸ್ ಆಟೋ ಎದುರಿಗೆ ಬಂದಿದೆ. ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ಯತ್ನಿಸಿದ್ದು, ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.