SHIVAMOGGA LIVE NEWS | 8 FEBRURARY 2023
SAGARA : ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು (marikamba jathre) ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ ದೇವಸ್ಥಾನದಲ್ಲಿ ಜಮಾಯಿಸಿದ್ದರು.
ಹೆಣ್ಣು ಒಪ್ಪಿಸುವ ಶಾಸ್ತ್ರ
ಮಂಗಳವಾರ ರಾತ್ರಿ 11ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ನಡೆಯಿತು. ನಂತರ ಹೆಣ್ಣು ಒಪ್ಪಿಸುವ ಧಾರ್ಮಿಕ ಪೂಜಾ ವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ನೂಕು ನುಗ್ಗಲಾಯಿತು. ಶ್ರೀ ದೇವಿಯ ದಂಡಿನ ಮೆರವಣಿಗೆಯು ಪ್ರಸಿದ್ಧ ಕಲಾತಂಡಗಳ ಪಾಲ್ಗೊಳ್ಳುವಿಕೆಯ ಜತೆಯಲ್ಲಿ ನಡೆಯಿತು. ಭಕ್ತರು ದೇವಿಯ ದರ್ಶನ ಪಡೆದರು.
ಕಲಾ ತಂಡಗಳು ಭಾಗಿ
ಬೆಳ್ತಂಗಡಿಯ ಸೃಷ್ಠಿ ಆರ್ಟ್ಸ್ ನ ಕಲಾವಿದರ ತಂಡ, ಕೀಲುಕುದುರೆ, ಕರಗ, ರಾಜ, ರಾಣಿ, ಸಿಂಹ ಸೇರಿದಂತೆ ವಿವಿಧ ವೇಷಧಾರಿಗಳು, ಹುಬ್ಬಳ್ಳಿಯ ಬ್ಯಾಂಡ್ ಬಳಗ, ಸಿರಸಿಯ ಮುಖೇಶ್ ಆರ್ಟ್ಸ್ ಬೇಡರ ವೇಷದ ಕಲಾವಿದರು, ಅರಸಿಕೇರೆಯ ಶ್ರೀ ರಾಮ ಯುವಕರ ಕಲಾಸಂಘದ ಸದಸ್ಯರು ಸೋಮನ ಕುಣಿತ, ನಂದಿಕೋಲು ನಡೆಸಿಕೊಟ್ಟರು.
ಇದನ್ನೂ ಓದಿ – ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವೈಭವದ ಚಾಲನೆ, ಇವತ್ತಿನಿಂದ 9 ದಿನ ಸಡಗರ, ಎಲ್ಲೆಲ್ಲಿ ಏನೇನು ನಡೆಯಲಿದೆ?
ವಾದ್ಯಗಾರರು ಕಾಂತಾರ ಚಲನಚಿತ್ರದ ಗೀತೆಯನ್ನು ನುಡಿಸಿದರು. ಮಂಡ್ಯ ಕೆ.ಆರ್.ನಗರದ ಆದಿಶಕ್ತಿ ತಂಡವು ನಗಾರಿ, ಡೊಳ್ಳು ಕಲಾವಿದರು, ಚಂಡೆವಾದನ, ಮಂಗಳವಾದ್ಯ ಸೇರಿದಂತೆ ಮುಂತಾದ ಕಲಾತಂಡಗಳ ಸದಸ್ಯರು ರಾಜಬೀದಿ ಉತ್ಸವದಲ್ಲಿ ಭಾಗವಹಿಸಿದ್ದರು.
ಭವ್ಯ ರಥದಲ್ಲಿ ಮೆರವಣಿಗೆ, ಪ್ರತಿಷ್ಠಾಪನೆ
ಭವ್ಯರಥದಲ್ಲಿ ಶ್ರೀ ಮಾರಿಕಾಂಬೆಯನ್ನು (marikamba jathre) ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬುಧವಾರ ಬೆಳಗ್ಗೆ ಗಂಡನ ಮನೆಗೆ ತರಲಾಯಿತು. ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಸಿದ್ಧಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.
ಗಂಡನ ಮನೆಯಲ್ಲಿ ದರ್ಶನ
ಇಂದಿನಿಂದ ಗಂಡನ ಮನೆ ಆವರಣದಲ್ಲಿ ಶ್ರೀ ಮಾರಿಕಾಂಬಾ ದೇವರ (marikamba jathre) ದರ್ಶನಕ್ಕೆ ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಗಂಡನ ಮನೆ ದೇವಸ್ಥಾನದಲ್ಲಿ ಶ್ರೀ ದೇವಿಯ ಘಟೇವು ಪ್ರವೇಶ ನಂತರ ಮಂಗಳಾರತಿ ನಡೆಸಲಾಯಿತು. ಫೆ. 15ರವರೆಗೂ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾರಿಕಾಂಬ ಜಾತ್ರೆಯ ಎರಡನೇ ದಿನವೂ ದೇವಿಯ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿ ಪೂಜೆ ಸಲ್ಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್
ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ, ಪೋತರಾಜ ರವಿ, ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ವಿವಿಧ ಸಮಿತಿ ಸಂಚಾಲಕರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200