ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 SEPTEMBER 2023
SAGARA : ವಾಹನಗಳ ಮೇಲಿನ ಪೂರ್ಣಾವಧಿ ತೆರಿಗೆ (Vehicle Tax) ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ವಾಹನ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಸಾಗರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಮಹಾ ಗಣಪತಿ ದೇವಸ್ಥಾನದಿಂದ ಪ್ರದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಹಲವು ಲಘು ವಾಹನಗಳು ಮೆರವಣಿಗೆಯಲ್ಲಿದ್ದವು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ಸರಕು ಸಾಗಣೆ ಮತ್ತು ಇತರೆ ವಾಹನಗಳಿಗೆ ಜೀವಾವಧಿ ತೆರಿಗೆ (Vehicle Tax) ವಿಧಿಸಲಾಗಿದೆ. ಇದು ಅತ್ಯಂತ ದುಬಾರಿಯಾಗಿದೆ. 15 ವರ್ಷದ ವಾಹನಗಳನ್ನು ಗುಜರಿಗೆ ಹಾಕುವಂತೆ ಆದೇಶ ಹೊರಡಿಸಲಾಗಿದೆ. ಈ ಆದೇಶಗಳಿಂದ ವಾಹನ ಮಾಲೀಕರು, ಚಾಲಕರು, ಕ್ಲೀನರ್, ಮೆಕಾನಿಕ್ ಸೇರಿದಂತೆ ಹಲವರ ಜೀವನ ನಿರ್ವಹಣೆಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಈ ನೀತಿಗಳನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಐ.ವಿ.ಹೆಗಡೆ, ಬಾಳೆಕಾಯಿ ಚಂದ್ರಣ್ಣ, ವಿರೂಪಾಕ್ಷ ಸಾಗರ, ಪ್ರಕಾಶ್ ಭಟ್, ಪ್ರಭು, ಪ್ರಕಾಶ್ ಅಶೋಕ್, ಮಂಜುನಾಥ್ ಸೇರಿದಂತೆ ಇನ್ನಿತರರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






