ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 31 ಅಕ್ಟೋಬರ್ 2020
ಸಾಲ ವಸೂಲಾತಿ ನೆಪದಲ್ಲಿ ಸಾಲ ಪಡೆದವರ ಮನೆಗಳ ಬಳಿಗೆ ಬಂದು ಗೂಂಡಾಗಿರಿ, ದೌರ್ಜನ್ಯ ಎಸಗುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಋಣ ಮುಕ್ತ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಕೆಲವು ಮೈಕ್ರೋಫೈನಾನ್ಸ್ ಸಂಸ್ಥೆಗಳು ಸರ್ಕಾರದಿಂದ ಸಹಾಯ, ಸೌಲಭ್ಯ, ತೆರಿಗೆ ವಿನಾಯಿತಿ ಪಡೆದಿವೆ. ಆದರೆ ಬಡ್ಡಿ ವ್ಯವಹಾರ ನಡೆಸಿ ಬಡವರ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿದರು.
ಸಾಲ ವಸೂಲಿಗೆ ಮನೆ ಬಾಗಿಲಿಗೆ ಬರುವಂತಿಲ್ಲ, ಬಲವಂತದ ವಸೂಲಿ, ಜಪ್ತಿ ಮಾಡುವಂತಿಲ್ಲ ಎಂಬ ನಿಯಮವಿದೆ. ಹಾಗಿದ್ದೂ ಆರ್‍ಬಿಐ ಅನುಮತಿ ನೀಡಿದೆ ಎಂದು ಸುಳ್ಳು ಹೇಳಿಕೊಂಡು ಮನೆ ಬಾಗಿಲಿಗೆ ಬಂದು ವಸೂಲಿ ನೆಪದಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹ ಸಂಸ್ಥೆಗಳು ಮತ್ತು ಅದರ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಮಿತಿ ರಾಜ್ಯಾಧ್ಯಕ್ಷ ಬಿ.ಎಂ.ಭಟ್, ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಪರಮೇಶ್ವರ್ ದೂಗೂರು, ಪ್ರಮುಖರಾದ ಚಂದ್ರೇಶಖರ್, ಲತಾ, ನವೀನ್ ಪುತ್ತೂರು, ಚಂದ್ರಶೇಖರ ಗೂರಲಕರೆ, ಶಾಂತಾ, ಪಾರ್ವತಿ, ನೇತ್ರಾವತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422