ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 DECEMBER 2022
ಬ್ಯಾಕೋಡು : ಶರಾವತಿ ಹಿನ್ನೀರಿನ ಕರೂರು ಹೋಬಳಿಯಲ್ಲಿ (karur hobli) ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಬ್ಯಾಕೋಡು ಸಮೀಪ ಸಸಿಗೊಳ್ಳಿಯಲ್ಲಿ ಗ್ರಾಮಸ್ಥರು ವಾಹನ ಸಂಚಾರ ತಡೆದು ಪ್ರತಿಭಟಿಸಿದರು. ಸಾಲು ಸಾಲು ಕಳ್ಳತನವಾಗುತ್ತಿದ್ದರೂ ಆರೋಪಿಗಳ ಬಂಧನವಾಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
(karur hobli)
ಸಾಲು ಸಾಲು ಕಳ್ಳತನ ಕೇಸ್
ಸಸಿಗೊಳ್ಳಿಯ ತರಕಾರಿ ವ್ಯಾಪಾರಿ ಬಾಬು ಜೈನ್ ಅವರ ಮನೆಗೆ ಗುರುವಾರ ರಾತ್ರಿ ಕಳ್ಳರು ನುಗ್ಗಿದ್ದಾರೆ. 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ. ಅದೆ ರಾತ್ರಿ ಬ್ಯಾಕೋಡಿನ ರಾಘವೇಂದ್ರ ಶೇಟ್ ಅವರ ಮನೆಗೆ ನಗ್ಗಿರುವ ಕಳ್ಳರು ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ.
ಆರು ತಿಂಗಳ ಹಿಂದೆ ಬೇರಾಳದ ರಮೇಶ್ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಈಚೆಗೆ ಸುಳ್ಳಳ್ಳಿಯ ಸತೀಶ್ ಎಂಬುವವರ ಮನೆಯಲ್ಲಿ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನಾಗಿತ್ತು. ಕರೂರು ಹೋಬಳಿಯ ಸುಂದರ್ ಶೇಟ್ ದಂಪತಿ ಹತ್ಯೆ ಪ್ರಕರಣದ ಆರೋಪಿಗಳು ಇನ್ನು ಸಿಕ್ಕಿಲ್ಲ.
(karur hobli)
ಆರೋಪಿಗಳ ಬಂಧನಕ್ಕೆ ಆಗ್ರಹ
ಕರೂರು ಹೋಬಳಿಯಲ್ಲಿ ನಡೆದ ಕಳ್ಳತನಗಳು ಮತ್ತು ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಗ್ರಮಸ್ಥರು ಪಟ್ಟು ಹಿಡಿದರು. ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿದರು. ಇದರಿಂದ ಕೆಲವು ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರ್ಗಲ್ ಠಾಣೆ ಪಿಎಸ್ಐ ತಿರುಮಲೇಶ್ ಅವರು, ಸ್ಥಳೀಯರನ್ನು ಸಮಾಧಾನಪಡಿಸಿದರು. ಕಳ್ಳತನ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಜೋಡಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಎಲ್ಲವನ್ನು ಬಹಿರಂಗಪಡಿಸಿದರೆ ತನಿಖೆಗೆ ತೊಂದರೆಯಾಗಲಿದೆ ಎಂದು ಮನವರಿಕೆ ಮಾಡಿದರು. ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.
ಕುದರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಬೊಬ್ಬಿಗೆ, ಸದಸ್ಯ ಸುಧಾಕರ ಸಸಿಗೊಳ್ಳಿ, ಗಣಪತಿ ಸಿಗ್ಲು, ದೇವರಾಜ ಕಪ್ಪದೂರು, ರವಿ ಅಳುರು, ಸರೇಶ್ ಕೆರೋಡಿ, ರವಿ ಕುಣಜೆ, ಗಣಪಯ್ಯ ಸೆಟ್ಟಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422