SHIVAMOGGA LIVE NEWS | 9 ಮಾರ್ಚ್ 2022
ಸಾಗರದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ನಾಮಫಲಕ ಬದಲಾವಣೆಗೆ ಆಗ್ರಹಿಸಿ, ಸ್ಥಳೀಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಅರಸ ಶಿವಪ್ಪನಾಯಕ ಅವರ ಹೆಸರು ಇಡಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಈ ಹೆಸರು ಘೋಷಣೆಯಾಗಿತ್ತು. ಒಂದು ವರ್ಷ ಕಳೆದರೂ ನಾಮಫಲಕ ಅಳವಡಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇನ್ನು, ಸ್ಥಳೀಯರಿಗೆ ಉದ್ಯೋಗ ಕೊಡುವುದಾಗಿ ಯಡಿಯೂರಪ್ಪ ಅವರು ಹೇಳಿದ್ದರು. ಆದರೆ ಕೃಷಿ ವಿವಿ ಅಧಿಕಾರಿಗಳು ತಮಗೆ ಬೇಕಾದವರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಮತ್ತು ತೋಟಗಾರಿಗೆ ವಿವಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೆಲ ಹೊತ್ತು ರೆಸ್ತೆ ತಡೆ ನಡೆಸಿದರು. ವಿವಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹೊಸ ನಾಮಫಲಕ ಅಳವಡಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಪ್ರಮುಖರಾದ ಶಾಂತಪ್ಪಗೌಡ, ರವಿಕುಮಾರ್ ಎಸ್.ಯಡೆಹಳ್ಳಿ, ರೇವಪ್ಪ ಹೊಸಕೊಪ್ಪ, ದೇವು ಬೀಸನಗದ್ದೆ, ಪ್ರಮೋದ ಶ್ರೀನಿವಾಸ್, ಹೇಮರಾಜ್ ಮೆಣಸಿನಸರ, ಅರುಣ್ ಗೌಡ, ವೀಣಾ ರಾಜೇಶ್, ಪ್ರವೀಣ್, ಸೃಜನ್ ಹೊಸಕೊಪ್ಪ, ನವೀನ್, ಸುಶಾಂತ್, ಪ್ರಸನ್ನ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200