ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SECURITY | 3 ಜೂನ್ 2022
ನಕಲಿ ಬುದ್ದಿಜೀವಿಗಳ ಮಾತಿಗೆ ಮನ್ನಣೆ ನೀಡದೆ ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿರುವ ಪುಠ್ಯಪುಸ್ತಕವನ್ನು ಸರ್ಕಾರ ಮುದ್ರಣ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪಠ್ಯಪುಸ್ತಕ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸ.ಮಿತಿ ಸದಸ್ಯರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಈ ಪಠ್ಯಪುಸ್ತಕಗಳನ್ನು ಮುದ್ರಿಸಬೇಕು ಎಂದು ಮನವಿ ಮಾಡಲಾಯಿತು.
ಇನ್ನು, ರೋಹಿತ್ ಚಕ್ರತೀರ್ಥ ಮತ್ತು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿರುವ ಸದಸ್ಯರಿಗೆ ಸರ್ಕಾರ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೆ ವೇಳೆ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರಧಾನ ಸಂಚಾಲಕ ಮ.ಸ.ನಂಜುಂಡಸ್ವಾಮಿ, ನಿವೃತ್ತ ಪ್ರಾಚಾರ್ಯ ಅ.ಪು.ನಾರಾಯಣಪ್ಪ, ನಗರ ಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಪುರುಷೋತ್ತಮ, ಸವಿತಾ ವಾಸು, ಬಿ.ಹೆಚ್.ಲಿಂಗರಾಜು, ಸತೀಶ್, ಪ್ರೇಮ ಸಿಂಗ್, ಮೈತ್ರಿ ಪಾಟೀಲ್, ಸಂತೋಷ್ ಶೇಟ್, ಪ್ರಮುಖರಾದ ರಾಜೇಂದ್ರ ಪೈ ಹಾರಾಡಿ, ಕೃಷ್ಣ ಶೇಟ್, ಪ್ರವೀನ್, ನಾರಾಯಣಮೂರ್ತಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಮಾಜಿ ಸಚಿವ ಈಶ್ವರಪ್ಪ ವಿರುದ್ಧ ದೆಹಲಿ ಪೋಲೀಸರಿಗೆ ದೂರು ನೀಡಿದ ರಾಜ್ಯಸಭಾ ಸದಸ್ಯ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422