ಶಿವಮೊಗ್ಗ ಲೈವ್.ಕಾಂ | SHIMOGA | 15 ಮಾರ್ಚ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಂಕಿತ ಮಂಗನ ಕಾಯಿಲೆಗೆ ಮೃತರಾಗಿರುವ ಕೋಮರಾಜ್ ಜೈನ್ ಅವರ ಮೃತದೇಹವನ್ನು ಅರಳಗೋಡು ಗ್ರಾಮ ಪಂಚಾಯಿತಿ ಮುಂದೆ ಇರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಗ್ರಾಮಕ್ಕೆ ಬರುವವರೆಗೂ ಸಂಸ್ಕಾರ ಮಾಡುವುದಿಲ್ಲ ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಮೃತದೇಹ ಇರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸಗುಪ್ಪೆ ಗ್ರಾಮದ ಕೋಮರಾಜ್ ಜೈನ್ (36) ಅವರು ಶಂಕಿತ ಮಂಗನ ಕಾಯಿಲೆಯಿಂದೆ ಮೃತರಾಗಿದ್ದಾರೆ. ಕೋಮರಾಜ್ ಅವರು ಮಣಿಪಾಲದ ಆಸ್ಪತ್ರೆಯಲ್ಲಿ ಮಂಗನಕಾಯಿಲೆಗೆ ಚಿಕಿತ್ಸೆ ಪಡೆದಿದ್ದಾರೆ. ಆದರೆ ಆಸ್ಪತ್ರೆಯ ಬಿಲ್ ಪಾವತಿಸಲಾಗಿದೆ, ಡಿಸ್ಚಾರ್ಜ್ ಆಗಿದ್ದರು.
ಊರಿಗೆ ಬರುತ್ತಿದ್ದಂತೆ ಪುನಃ ಆರೋಗ್ಯ ಸಮಸ್ಯೆ ಉಂಟಾಗಿದೆ. ಹಣದ ಸಮಸ್ಯೆಯಿಂದಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮಂಗನ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ಕೊಡಿಸದೆ, ಅರಳಗೋಡಿನಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
ಶಾಸಕ ಹರತಾಳು ಹಾಲಪ್ಪ, ಸಾಗರ ಉಪ ವಿಭಾಗಾಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ನಡುವೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಅಲ್ಲದೆ ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






