ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 9 ಸೆಪ್ಟಂಬರ್ 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿಗೆ ಸೇರಿಸದಂತೆ ಆಗ್ರಹಿಸಿದ ಸಾಗರದಲ್ಲಿ ನಾಗರಿಕ ವೇದಿಕೆ ವತಿಯಿಂದ ಉಪ ವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಿಗಂದೂರು ಕ್ಷೇತ್ರಕ್ಕೆ ಶತಮಾನಗಳ ಐತಿಹ್ಯವಿದೆ. ಧರ್ಮದರ್ಶಿ ರಾಮಪ್ಪ ಅವರು ಸುಮಾರು 30 ವರ್ಷದಿಂದ ದೇಗುಲದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಸಿಗಂದೂರು ಚೌಡೇಶ್ವರಿ ಟ್ರಸ್ಟ್ ಮೂಲಕ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳನ್ನು ನಡೆಸುತ್ತಿದ್ದಾರೆ. ದೇಗುಲಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯ ಒದಗಿಸಲು ಶ್ರಮಿಸುತ್ತಿದ್ದಾರೆ ಎಂದು ವೇದಿಕೆ ಪ್ರಮುಖರು ತಿಳಿಸಿದರು.
ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯದಿಂದ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಅವರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸಲಾಗುತ್ತಿದೆ. ಪ್ರತಿವರ್ಷ 1500 ವಿದ್ಯಾರ್ಥಿಗಳಿಗೆ ಉಚಿತ ವಿದ್ಯಭ್ಯಾಸದ ವ್ಯವಸ್ಥೆ ಮಾಡಲಾಗಿದೆ. ಇಂತಹ ಕ್ಷೇತ್ರದ ಅಭಿವೃದ್ಧಿ ಸಹಿಸದ ಕೆಲವರು ಮುಜರಾಯಿ ವ್ಯಾಪ್ತಿಗೆ ಒಳಪಡಿಸುವಂತೆ ಹೇಳುತ್ತಿದ್ದಾರೆ. ಒಂದು ವೇಳೆ ಮುಜರಾಯಿಗೆ ಸೇರಿಸುವ ಪ್ರಯತ್ನವಾದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಾಗರಿಕ ವೇದಿಕೆ ಅಧ್ಯಕ್ಷ ಎಂ.ರಾಜಶೇಖರ್, ಷಣ್ಮುಖ ಕೆಂಚನಾಳಸರ, ಕೆ.ಲಕ್ಷ್ಮಣ್, ಎ.ಶೇಟ್, ಪಡವಗೋಡು ಬಂಗಾರಪ್ಪ, ಸತೀಶ್ ಕುಮಾರ್, ವಿನಾಯಕ್, ಪ್ರಕಾಶ್ ಇದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422