ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 JANUARY 2023
SAGARA : ಮೈಸೂರಿನ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
‘ಡಿ.26ರಂದು ಮಾರ್ಗಶಿರ ಹುಣ್ಣಿಮೆಯಂದು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರಮ ನೆರೆವೇರಿಸಲಾಗುತ್ತಿತ್ತು. ಈ ಸಂದರ್ಭ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಆನಂದ ಬಾಳೆಕೊಪ್ಪ, ಕೆ.ವಿ.ಪ್ರವೀಣ್, ಸುದರ್ಶನ್, ಸಂತೋಷ್ ಶಿವಾಜಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಿಕಾರಿಪುರದಲ್ಲಿಯು ಆಕ್ರೋಶ
ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಶಿಕಾರಿಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422