ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 MARCH 2023
SAGARA : ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಲ್ಲಿ ನೀಡಿದ್ದ ಅಹವಾಲುಗಳಿಗೆ ಯಾವುದೆ ಪ್ರತಿಕ್ರಿಯೆ ಬಂದಿಲ್ಲ. ಸಮಸ್ಯೆಗಳು ಪರಿಹಾರವಾಗಿಲ್ಲ. ಆದ್ದರಿಂದ ಮಾ.18ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ (Protest Warning) ನಡೆಸಲಾಗುತ್ತದೆ ಎಂದು ತಾಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ಕೆಳದಿ ರಮೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಳದಿ ರಮೇಶ್, ಆರು ತಿಂಗಳ ಹಿಂದೆ ಸಾಗರ ತಾಲೂಕು ಹೆಗ್ಗೋಡಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯಿತು. ಆರು ಕಿ.ಮೀ ಇರುವ ಶಾಲೆಗೆ ವಿದ್ಯಾರ್ಥಿಗಳು ನಡೆದು ಹೋಗುತ್ತಿದ್ದಾರೆ. ಮೊದಲಿದ್ದಂತೆ ಬಸ್ ಸೇವೆ ಕಲ್ಪಿಸಿಕೊಡಿ ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಈತನಕ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೇಡಿಸ್ ನೈಟ್ ಪಾರ್ಟಿ, ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ
ಇನ್ನು, ಮುಂಡಿಗೆಸರದ ಬಡ ಕುಟುಂಬವೊಂದು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಮನವಿ ಮಾಡಿತ್ತು. ಎರಡೇ ದಿನದಲ್ಲಿ ಸಂಪರ್ಕ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ಅವರು ಭರವಸೆ ನೀಡಿದ್ದರು. ಈತನಕ ಭರವಸೆ ಈಡೇರಿಲ್ಲ. ಇದೆ ರೀತಿ ಹಲವು ಬೇಡಿಕೆ ಈಡೇರಿಲ್ಲ. ಆದ್ದರಿಂದ ಮಾ.18ರಂದು ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ಳೂರು ಗ್ರಾಮದಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪ್ರತಿಭಟನೆ (Protest Warning) ನಡೆಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422