ಮಕ್ಕಳ ಕಳ್ಳಿ ಅಂತಾ ಮಹಿಳೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ, ವಿಚಾರಣೆ ವೇಳೆ ಗೊತ್ತಾಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGAR | ಮಕ್ಕಳ ಕಳ್ಳಿ (CHILD THEFT) ಎಂದು ಭಾವಿಸಿ ಮಹಿಳೆಯೊಬ್ಬರನ್ನು ಹಿಡಿದು ಸಾರ್ವಜನಿಕರೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವಿಚಾರ ತಿಳಿದು ಸಾಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.

Shimoga Nanjappa Hospital

ಸಾಗರ ಪಟ್ಟಣದಲ್ಲಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು ಮಕ್ಕಳ ಕಳ್ಳಿ ಎಂದ ಭಾವಿಸಿ ಸಾರ್ವಜನಿಕರು ಆಕೆಯನ್ನು ವಿಚಾರಿಸಿದ್ದಾರೆ. ಅಲ್ಲದೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು.

ಠಾಣೆ ಮುಂದೆ ಸೇರಿದ ಜನ

ಇನ್ನು, ಮಕ್ಕಳ ಕಳ್ಳಿ (CHILD THEFT) ಪತ್ತೆಯಾಗಿದ್ದಾಳೆ ಎಂದು ತಿಳಿದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಾಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.

ಮಹಿಳೆಯ ವಿಚಾರಣೆ ನಡೆಸಿದ ಪೊಲೀಸರು, ಬಳಿಕ ಆಕೆ ಮಕ್ಕಳ ಕಳ್ಳಿ ಅಲ್ಲ ಎಂದು ತಿಳಿಸಿದರು. ಸಾಗರದಲ್ಲಿರುವ ತನ್ನ ಸ್ನೇಹಿತೆಯ ಮನೆಗೆ ಮಹಿಳೆ ಆಗಮಿಸಿದ್ದಳು ಎಂದು ಖಚಿತಪಡಿಸಿದರು. ಅಲ್ಲದೆ ಈ ಮಹಿಳೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಹರಿಬಿಡಲಾಗಿದೆ ಎಂದರು.

ಸಾಗರದಲ್ಲಿ ಮಕ್ಕಳ ಕಳ್ಳತನದ ಯಾವುದೆ ವರದಿಯಾಗಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದರು.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಮದುವೆಗೆ ಒಪ್ಪದ ಪ್ರಿಯಕರ, ವಿಷ ಕುಡಿದು ಯುವತಿ ಆತ್ಮಹತ್ಯೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment