ಪಲ್ಸರ್‌ ಬೈಕ್‌ ಗಿಫ್ಟ್‌ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JANUARY 2024

SAGARA : 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌ ಉಡುಗೊರೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ. ಶಿಕ್ಷಕ ಮತ್ತು ಅವರ ಪತ್ನಿ ಬೈಕ್‌ ಹತ್ತಿ ಶಾಲೆ ಬಳಿ ರೌಂಡ್‌ ಹಾಕುವುದನ್ನು ಕಂಡು ಗ್ರಾಮಸ್ಥರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ.

ಸಾಗರ ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಸಂತೋಷ್‌ ಕಾಂಚನ್‌ ಅವರು ಕುಂದಾಪುರದ ವಾರಾಹಿ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಶಾಲೆ ಆವರಣದಲ್ಲಿ ಅವರಿಗಾಗಿ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಇಡೀ ಊರಿನ ಮನ ಗೆದ್ದಿದ್ದರು

ಕುಗ್ರಾಮ ವಳೂರಿನಲ್ಲಿ ಸಂತೋಷ್‌ ಕಾಂಚನ್‌ ಅವರು 16 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಈ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗಿದ್ದರು. ಶಾಲೆ ಅವಧಿ ಮಾತ್ರವಲ್ಲದೆ ಮಕ್ಕಳಿಗೆ ಹಗಲು ರಾತ್ರಿ ಪಾಠ ಮಾಡುತ್ತಿದ್ದರು. ಹಾಗಾಗಿ ಇಲ್ಲಿ ಓದಿದವರು ವಿವಿಧೆಡೆ ಉನ್ನತ ವ್ಯಾಸಂಗಕ್ಕೆ ತೆರಳಿದ್ದಾರೆ. ಇನ್ನು, ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರಿಗು ಸಂತೋಷ್‌ ಕಾಂಚನ್‌ ನೆರವಾಗಿದ್ದರು. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಮನ ಗೆದ್ದಿದ್ದ ಸಂತೋಷ್‌ ಕಾಂಚನ್‌ ಅವರ ವರ್ಗಾವಣೆ ಗ್ರಾಮಸ್ಥರ ಹೃದಯವನ್ನು ಭಾರಗೊಳಿಸಿತ್ತು.

ಇದನ್ನೂ ಓದಿ – ಶಿವಮೊಗ್ಗದ ಜೈಲ್‌ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು

ವೇದಿಕೆ ಮುಂಭಾಗಕ್ಕೆ ಬಂತು ಪಲ್ಸರ್‌

ಸಂತೋಷ್‌ ಕಾಂಚನ್‌ ಅವರಿಗೆ ಗ್ರಾಮಸ್ಥರು ವಿಭಿನ್ನವಾಗಿ ಬೀಳ್ಕೊಡುಗೆ ನೀಡಲು ಯೋಜಿಸಿದ್ದರು. ಅದರಂತೆ ಅವರಿಗೆ ಪಲ್ಸರ್‌ ಬೈಕ್‌ ಉಡುಗೊರೆಯಾಗಿ ನೀಡಿದ್ದಾರೆ. ‘ನಮ್ಮೂರಿನಲ್ಲಿ ಯಾವುದೆ ವಾಹನಗಳು ಇಲ್ಲದಿದ್ದಾಗ ಶಿಕ್ಷಕ ಸಂತೋಷ್‌ ಕಾಂಚನ್‌ ಅವರು ತಮ್ಮ ಬೈಕಿನಲ್ಲೆ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ಕರೆದೊಯ್ಯುತ್ತಿದ್ದರು. ಅವರ ಬೈಕ್‌ ಊರಿನ ಪಾಲಿಗೆ ಬೈಕ್‌ ಆಂಬುಲೆನ್ಸ್‌ ಆಗಿತ್ತು. ರಾತ್ರಿ, ಹಗಲೆನ್ನದೆ ಊರಿನವರಿಗೆ ನೆರವಾಗಿದ್ದಾರೆ. ನಮ್ಮ ಮಕ್ಕಳನ್ನು ಶಾಲೆಗೆ ಕರೆದೊಯ್ದು ಪಾಠ ಕಲಿಸಿದ್ದಾರೆ. ಅವರು ವರ್ಗಾವಣೆ ಆಗಿರುವುದು ಬೇಸರ ತಂದಿದೆ’ ಅನ್ನುತ್ತಾರೆ ಎಸ್‌ಡಿಎಂಸಿ ಅಧ್ಯಕ್ಷ ಹೆಚ್‌.ಎನ್.ಮಂಜುನಾಥ್.‌

Pulsar-Bike-gift-to-teacher-by-villagers-at-valuru-teacher-santosh-kanchan

ಭಾನುವಾರವಾದರು ಬಂದು ಬೋಧಿಸುತ್ತೇನೆ

ವಳೂರು ಸರ್ಕಾರಿ ಶಾಲೆ ಎಲ್ಲ ನಗರ, ಪಟ್ಟಣಗಳಿಂದಲು ಬಹು ದೂರದಲ್ಲಿದೆ. ಸಾಗರ ತಾಲೂಕು ಕೇಂದ್ರದಿಂದ 80 ಕಿ.ಮೀ, ಹೊಸನಗರದಿಂದ 85 ಕಿ.ಮೀ ದೂರದಲ್ಲಿದೆ. ದಟ್ಟ ಕಾಡಿನ ಮಧ್ಯದಲ್ಲಿ, ಯಾವುದೆ ಸೌಲಭ್ಯಗಳಿಲ್ಲದ ಶಾಲೆಗೆ 2007ರಲ್ಲಿ ಸಂತೋಷ್‌ ಕಾಂಚನ್‌ ಶಿಕ್ಷಕರಾಗಿ ಬಂದರು. ಶಾಲೆಯಲ್ಲೇ ಉಳಿದುಕೊಂಡು ಮಕ್ಕಳಿಗೆ ಪಾಠ ಮಾಡುತ್ತಿದ್ದರು. ‘ಕೌಟುಂಬಿಕ ಕಾರಣಕ್ಕೆ ವರ್ಗಾವಣೆಯಾಗುತ್ತಿದ್ದೇನೆ. ಊರಿನವರು ಬಯಸಿದರೆ ಭಾನುವಾರವಾದರು ಬಂದು ಮಕ್ಕಳಿಗೆ ಬೋಧನೆ ಮಾಡುತ್ತೇನೆ. ಊರಿನವರು ಮತ್ತು ಮಕ್ಕಳ ಋಣ ತೀರಿಸಲು ಸಾಧ್ಯವಿಲ್ಲʼ ಅನ್ನುತ್ತಾರೆ ಶಿಕ್ಷಕ ಸಂತೋಷ್‌ ಕಾಂಚನ್.‌

Pulsar-Bike-gift-to-teacher-by-villagers-at-valuru-teacher-santosh-kanchan

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೆ ಸಭೆ, ಸಮಾರಂಭಗಳೆ ನಡೆಯೋದಿಲ್ಲ, ಎಲ್ಲಕ್ಕು ಇವರು ಅನಿವಾರ್ಯ ಪ್ರೇಕ್ಷಕರು

ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳೆಲ್ಲ ಸೇರಿ ಬೈಕ್‌ ಉಡುಗೊರೆಯಾಗಿ ನೀಡಿ ಶಿಕ್ಷಕರೊಬ್ಬರಿಗೆ ಬೀಳ್ಕೊಡುಗೆ ನೀಡಿರುವುದು ವಿಭಿನ್ನವಾಗಿದೆ. ಊರಿನವರ ಮನಸಲ್ಲಿ ಶಿಕ್ಷಕ ಸಂತೋಷ್‌ ಕಾಂಚನ್‌ ಅಚ್ಚಾಗಿ ಉಳಿದಿರುವುದಕ್ಕೆ ಇದು ಸಾಕ್ಷಿಯಾಗಿದೆ.

Pulsar-Bike-gift-to-teacher-by-villagers-at-valuru-teacher-santosh-kanchan

Pulsar-Bike-gift-to-teacher-by-villagers-at-valuru-teacher-santosh-kanchan

Pulsar-Bike-gift-to-teacher-by-villagers-at-valuru-teacher-santosh-kanchan

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 11, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment