ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 11 ಮೇ 2019
ನಗರಸಭೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಸಮೋಸ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಸಾಗರದ ಮೀನು ಮಾರುಕಟ್ಟೆ ಬಳಿ ಇರುವ ಸಮೋಸ ಮಾರಾಟ ಮಳಿಗೆಗಳ ಮೇಲೆ ರೇಡ್ ಮಾಡಿದ್ದರು.
ದಾಳಿ ವೇಳೆ, ಸಮೋಸ ಮಾರಾಟ ಮಾಡುವವರು ಸ್ವಚ್ಛತೆ ಕಾಪಾಡದೆ ಇರುವುದು, ಒಮ್ಮೆ ಬಾಣಲೆಗೆ ಎಣ್ಣೆ ಹಾಕಿದರೆ ಅದು ಬತ್ತುವವರೆಗೂ ಸಮೋಸ ಮಾಡುವುದು, ಎರಡ್ಮೂರು ದಿನದ ಹಿಂದೆ ಕತ್ತರಿಸಿದ ತರಕಾರಿ ಬಳಕೆ ಮಾಡುವುದು, ರುಚಿ ಹೆಚ್ಚಿಸಲು ಟೇಸ್ಟಿಂಗ್ ಪೌಡರ್ ಬಳಕೆ ಸೇರಿದಂತೆ ಹಲವು ನ್ಯೂನತೆಗಳು ಕಂಡು ಬಂದಿವೆ.
ನ್ಯೂನತೆಗಳನ್ನು ಸರಿಪಡಿಸಿಕೊಂಡು, ಸ್ವಚ್ಛತೆ ಕಾಪಾಡುವಂತೆ ನಗರಸಭೆ ಅಧಿಕಾರಿಗಳು ಸಮೋಸ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





