SHIVAMOGGA LIVE NEWS | 28 DECEMBER 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಆನಂದಪುರ : ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್ ರೈಲಿನಲ್ಲಿ (Railway) ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡೆದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ, ಟೈಮಿಂಗ್ ಏನು?
ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್ ಬಂಧಿತ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ.
ಡಿಸೆಂಬರ್ 23ರಂದು ರೈಲಿನಲ್ಲಿ ಮಾಂಗಲ್ಯ ಸರ ಕಳ್ಳತನ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು ಮತ್ತಷ್ಟು ಮುಂಜಾಗ್ರತೆ ವಹಿಸಿದ್ದರು. ಆನಂದಪುರ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಸ್ಪಷ್ಟ ಮಾಹಿತಿ ನೀಡಿರಲಿಲ್ಲ. ವಿಚಾರಣೆ ತೀವ್ರಗೊಳಿಸಿದಾಗ ಮಾಂಗಲ್ಯ ಸರ ಕಳ್ಳತನ ಮಾಡಿದ್ದನ್ನು ಬಾಯಿಬಿಟ್ಟಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

ಇದನ್ನೂ ಓದಿ » ತಾಳಗುಪ್ಪ, ಶಿವಮೊಗ್ಗ, ಭದ್ರಾವತಿಯಿಂದ ಹೊರಡುವ ರೈಲುಗಳೆಷ್ಟು? ಟೈಮಿಂಗ್ ಏನು?
ಕದ್ದ ಮಾಂಗಲ್ಯ ಸರವನ್ನು ತನ್ನ ಊರಿನಲ್ಲಿ ಮಾರಾಟ ಮಾಡಲು ತೆರಳುತ್ತಿದ್ದಾಗ ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ವೇಳೆ 7 ತಿಂಗಳ ಹಿಂದೆ ಬೆಂಗಳೂರು ವಿಭಾಗದ ಹೆಜ್ಜಾಲದಲ್ಲಿ ರೈಲಿನಲ್ಲಿ ಮಾಂಗಲ್ಯ ಸರ ಕಳ್ಳತನ ಮಾಡಿದ್ದನ್ನು ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಧರ್ಮನಾಯ್ಕ್‌ಗೆ ಸಾಗರ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


ಇದನ್ನೂ ಓದಿ » ಈಜಲು ತೆರಳಿದ್ದ ಬಾಲಕ ನಾಪತ್ತೆ, ಬಾವಿ ಬಳಿ ಚಪ್ಪಲಿ, ಬಟ್ಟೆ ಪತ್ತೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






