ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 31 ಡಿಸೆಂಬರ್ 2019
ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸಬೇಕು ಮತ್ತು ಕೊಂಕಣ ರೈಲ್ವೆ ಸಂಪರ್ಕ ಕಲ್ಪಿಸಬೇಕು ಎಂದು ಆಗ್ರಹಿಸಿ ಮಲೆನಾಡು ರೈಲ್ವೆ ಹೋರಾಟ ಸಮಿತಿ ನೇತೃತ್ವದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗಣಪತಿ ದೇವಸ್ಥಾನದಿಂದ ಸಾಗರ ರೈಲ್ವೆ ನಿಲ್ದಾಣದವರೆಗೆ ಮೆರವಣಿಗೆ ನಡೆಸಲಾಯಿತು. ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಾಗರ ತಾಲೂಕು ತಾಳಗುಪ್ಪದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಿಸಲಾಗತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಇದು ಈ ಭಾಗದ ಜನರಿಗೆ ಮಾಡಿದ ಅನ್ಯಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಾಹಿತಿ ನಾ.ಡಿಸೋಜಾ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Malnad Railway Horata Samithi held a protest in Sagara for Railway Terminal in Talaguppa and connecting to Kokan Railway. Shivamogga Live Report.