ಶಿವಮೊಗ್ಗ ಲೈವ್
ಸಾಗರ: ತಾಲ್ಲೂಕಿನ ಹುಲಿ ದೇವರಬವನ ಸಮೀಪ ಓಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಗಾಯಾಳುಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಸಮಯಪ್ರಜ್ಞೆ ಮೆರೆದರು.
ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಈ ವೇಳೆ ತುಮರಿಯಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸ್ ತೆರಳುತ್ತಿದ್ದ ಶಾಸಕ ರಾಜೇಗೌಡ ಅವರು ಅಪಘಾತ ಗಮನಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಅಪಘಾತ ಸ್ಥಳಕ್ಕೆ ಆ್ಯಂಬುಲೆನ್ಸ್ ಬರಲು ವಿಳಂಬ ಆಗುತ್ತಿದ್ದ ಹಿನ್ನೆಲೆ ತಮ್ಮ ಬೆಂಗಾವಲು ವಾಹನದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರು.
