ಶಿವಮೊಗ್ಗ ಲೈವ್
ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರುಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿದೆ. ಈ ಬಾರಿ 71 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯಿಂದ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಮಾಜಿ ಸಚಿವ, ವಿಧಾನಸಭೆಯ ಮಾಜಿ ಸಭಾಪತಿ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ಸಾಮಾಜ ಸೇವೆ ವಿಭಾಗದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಮತ್ತು ಐದು ಲಕ್ಷ ನಗದನ್ನು ಒಳಗೊಂಡಿರುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ 71 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
