ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 21 ಏಪ್ರಿಲ್ 2020
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಬೀಗ ಹಾಕಿದವರ ವಿರುದ್ಧ ದೂರು ನೀಡುವಂತೆ ಆದೇಶಿಸಿ ತಾಲೂಕು ಪಂಚಾಯಿತಿ ಇಒಗೆ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸೂಚನೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹಾಗಾಗಿ ಬೀಗ ಹಾಕಿದವರ ವಿರುದ್ಧ ಕೂಡಲೇ ದೂರು ದಾಖಲಿಸಿ ಅನುಪಾಲನ ವರದಿ ನೀಡುವಂತೆ ಇಒಗೆ ಪತ್ರ ಬರೆದು ಸೂಚಿಸಿದ್ದಾರೆ.
ಕೆಲವು ಸದಸ್ಯರು ಅಧ್ಯಕ್ಷರ ಕೊಠಡಿಗೆ ಬೀಗ ಹಾಕುವುದಾಗಿ ತಿಳಿಸಿದ್ದು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಇದನ್ನು ಗಮನಿಸಿಯು ಏಕೆ ಕ್ರಮ ಕೈಗೊಂಡಿಲ್ಲ. ಬೀಗ ಹಾಕಿದವರು ಯಾರು ಎಂದು ತಿಳಿದಿದ್ದರೂ ಈತನ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೇಕೆ ದಾಖಲು ಮಾಡಿಲ್ಲ ಎಂದು ಮಲ್ಲಿಕಾರ್ಜುನ ಹಕ್ರೆ ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]