ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
ANANDAPURA : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗಾಣಿಗನ ಕೆರೆಯಲ್ಲಿ ಕೊಳೆತ ಮೀನುಗಳು ಪತ್ತಯಾಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಆತಂಕಗೊಂಡಿದ್ದರು. ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿದ್ದು, ತೇಲುತ್ತಿವೆ ಎಂದು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು.
ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋನಹ್ ಕುಮಾರ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದರು. ವಿವಿಧ ಗಾತ್ರದ ಮೀನುಗಳು ತೇಲುತ್ತಿರುವುದನ್ನು ಗಮನಿಸಿದರು. ಸತ್ತ ಮೀನುಗಳನ್ನು ಕೆರೆಗೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ ಗ್ರಾಮಸ್ಥರಲ್ಲಿದ್ದ ಆತಂಕ ದೂರಾಗಿದೆ.
ಇದನ್ನೂ ಓದಿ- ಐರಾವತ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದ ಕುಂದಾಪುರದ ಮಹಿಳೆ, ಮನೆಗೆ ಹೋಗಿ ಬ್ಯಾಗ್ ತೆಗೆದಾಗ ಆಘಾತ
ಹೆದ್ದಾರಿ ಪಕ್ಕದಲ್ಲಿಯೇ ಗಾಣಿಗನ ಕರೆ ಇದೆ. ಸಾರ್ವಜನಿಕರು ಈ ಕೆರೆಗೆ ಕಸ ಸುರಿಯುತ್ತಿದ್ದು ನೀರು ಮಲಿನಗೊಳುತ್ತಿದೆ. ಇನ್ಮುಂದೆ ಕೆರೆಗೆ ಕಸ ಸುರಿದರೆ ದಂಡ ವಿಧಿಸಲಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಎಚ್ಚರಿಕೆ ನೀಡಿದೆ.
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು
















