ನಿಯಂತ್ರಣ ತಪ್ಪಿದ ರಾಯಲ್‌ ಎನ್‌ಫೀಲ್ಡ್‌ ಬೈಕ್‌, ಅಪಘಾತ, ಸವಾರ ಸ್ಥಳದಲ್ಲೇ ಸಾವು

 ಶಿವಮೊಗ್ಗ  LIVE 

ಸಾಗರ: ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ (Royal Enfield) ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟೆಕೊಪ್ಪ ಗ್ರಾಮದ ನಿವಾಸಿ ರಮೇಶ್ (55) ಮೃತರು.

Royal-Enfiled-accident-near-anandapura.

ಆನಂದಪುರ ಬಳಿಯ ಬೈರಾಪುರ ಗ್ರಾಮದ ಹತ್ತಿರ ಚಲಿಸುತ್ತಿದ್ದ ವೇಳೆ ಸವಾರನ ನಿಯಂತ್ರಣ ತಪ್ಪಿದ ರಾಯಲ್‌ ಎನ್‌ಫೀಲ್ಡ್‌ ಬೈಕ್‌, ರಸ್ತೆ ಪಕ್ಕದಲ್ಲಿದ್ದ ಹೋರ್ಡಿಂಗ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಆನಂದಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ » ವೈನ್‌ ಶಾಪ್‌ನಲ್ಲಿ ಬಿಯರ್‌ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment