ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 17 ಫೆಬ್ರವರಿ 2020
ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಫೆ.18ರಿಂದ ಆರಂಭವಾಗಲಿದೆ. ಒಂಭತ್ತು ದಿನ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ರಾತ್ರಿ ಚಿಕ್ಕಮ್ಮನನ್ನು ಹೊರಡಿಸುವ ಕಾರ್ಯ ನಡೆಯಲಿದೆ. ಬಳಿಕ 9 ಮನೆಯಿಂದ ಘಟೆವು ತರಲಾಗುತ್ತದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ.
ಮಂಗಳವಾರ ಬೆಳಗ್ಗೆ ಗಣಪತಿ ದೇವಸ್ಥಾನದಲ್ಲಿ ತಾಳಿಪೂಜೆ ನೆರವೇರಲಿದೆ. ನಂತರ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜೆ ಸಲ್ಲಿಸಿ, ಮಂಗಳವಾದ್ಯದೊಂದಿಗೆ ತಾಯಿಯ ಮನೆ ದೇವಸ್ಥಾನದ ಆವರಣಕ್ಕೆ ಮೆರವಣಿಗೆ ಆಗಮಿಸಲಿದೆ. ಬಳಿಕ ಬ್ರಾಹ್ಮಿ ಮುಹೂರ್ತದಲ್ಲಿ ದೇವಿಗೆ ದೃಷ್ಟಿ ಇಡುವುದು ಮತ್ತು ಶ್ರೀ ಮಾರಿಕಾಂಬ ದೇವಿಯ ಪ್ರತಿಷ್ಠಾಪನೆ ನಡೆಯಲಿದೆ. ಗಂಡನ ಮನೆಯಲ್ಲಿ ಎಂಟು ದಿನ ದರ್ಶನಕ್ಕೆ ಅವಕಾಶ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]