ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಾಗರ ವಕೀಲರು ಗರಂ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021

ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸಾಗರದ ಉಪ ವಿಭಾಗಾಧಿಕಾರಿಗೆ ವಕೀಲರು ಮನವಿ ಸಲ್ಲಿಸಿದ್ದಾರೆ.

ಮಾರ್ಚ್ 31ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ವಕೀಲರೊಬ್ಬರ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಇದರ ವಿರುದ್ಧ ಕ‍ಠಿಣ ಕ್ರೈಗೊಳ್ಳಬೇಕು ಎಂದು ವಕೀಲರು ಆಗ್ರಹಿಸಿದರು.

ಏನಿದು ಕೇಸ್? ಏನಂದಿದ್ದರು ಡಿಕೆಶಿ?

ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಯಾವನೋ ತಗಳಾಂಡಿಯೊಬ್ಬ ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದಕ್ಕೆ ಎಫ್ಐಆರ್ ದಾಖಲಿಸುತ್ತೀರ ಎಂದಿದ್ದರು. ಸಾಗರದ ವಕೀಲ ಪ್ರವೀಣ್ ಕುಮಾರ್ ಅವರು ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದರು. ಇದನ್ನು ಉಲ್ಲೇಖಿಸಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.

ಪ್ರವೀಣ್ ಕುಮಾರ್ ಅವರನ್ನು ಅವಮಾನಿಸುವುದರ ಜೊತೆಗೆ ಇಡೀ ವಕೀಲ ಸಮುದಾಯಕ್ಕೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಮಾನ ಮಾಡಿದ್ದಾರೆ. ಹಾಗಾಗಿ ಸರ್ಕಾರ ಮತ್ತು ಮುಖ್ಯಮಂತ್ರಿ ಅವರು ಡಿ.ಕೆ.ಶಿವಕುಮಾರ್ ಅವರ ವಿರುದ್ಧ  ಕ್ರಮ ಕೈಗೊಳ್ಳಬೇಕು ಎಂದು ವಕೀಲರು ಆಗ್ರಹಿಸಿದರು.

ವಕೀಲರ ಸಂಘದ ಅಧ್ಯಕ್ಷ ರವೀಶ್, ವಕೀಲರಾದ ಅಣ್ಣಪ್ಪ, ಷಣ್ಮುಖ, ಮೃತ್ಯುಂಜಯ, ನಾಗರಾಜಯ್ಯ, ಲಿಂಗರಾಜ್, ಪ್ರಸಾದ್ ಸೇರಿದಂತೆ ಹಲವರು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment