ಸಾಗರ ಬಂದ್‌, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ, ಹೇಗಿತ್ತು ಜನರ ಪ್ರತಿಕ್ರಿಯೆ?

 ಶಿವಮೊಗ್ಗ  LIVE 

ಸಾಗರ: ಸಾಗರಕ್ಕೆ ಜಿಲ್ಲಾ ಕೇಂದ್ರದ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ನೀಡಿದ್ದ ಸಾಗರ ಬಂದ್ (Sagara Bandh) ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಹೇಗಿತ್ತು ಬಂದ್‌? ಇಲ್ಲಿದೆ ಪಾಯಿಂಟ್ಸ್‌

Sagara-Bandh

  • ನಗರವ್ಯಾಪ್ತಿಯ ಅಂಗಡಿಗಳು, ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಿದ್ದವು. ಬೀದಿ ಬದಿ ವ್ಯಾಪಾರಿಗಳು ವಹಿವಾಟು ಸ್ಥಗಿತಗೊಳಿಸಿದ್ದರು.
  • ಬೆಳಗ್ಗೆಯಿಂದ ಸಂಜೆಯವರೆಗೆ ಖಾಸಗಿ ಬಸ್‌ಗಳ ಸಂಚಾರ ಇರಲಿಲ್ಲ. ನ್ಯಾಯಾಲಯದ ಕಾರ್ಯಕಲಾಪಗಳಿಂದ ವಕೀಲರು ದೂರ ಉಳಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
  • ಸರ್ಕಾರಿ ಕಚೇರಿ, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ

ಸಾಗರವನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಗಣಪತಿ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಕಾರರು ಸಾಗರ್ ಹೋಟೆಲ್ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment