ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಸಾಗರ: ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು (Farmer) ಸಾಲದ ಸಂಕಷ್ಟದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಮಪ್ಪ (56) ಎಂದು ಗುರುತಿಸಲಾಗಿದೆ.
ಗಾಮಪ್ಪ, ಅಕ್ಟೋಬರ್ 9 ರಂದು ಸಂಜೆ ವಿಷ ಸೇವಿಸಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರೈತ ಗಾಮಪ್ಪ ಅವರು ಬ್ಯಾಂಕ್‌ಗಳು ಮತ್ತು ಖಾಸಗಿಯಾಗಿ ಕೈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ, ರಾಜ್ಯದಲ್ಲಿ ಶುರುವಾಗಲಿದೆ ಎರಡು ವಿಶೇಷ ಶಾಲೆ

