‘ಸಾಗರದ ಗಣಪತಿ ಕೆರೆ ಅಭಿವೃದ್ಧಿಯಲ್ಲಿ ಅವ್ಯವಹಾರ, ತನಿಖೆ ಸಾಧ್ಯತೆ’

SHIVAMOGGA LIVE NEWS | 22 NOVEMBER 2023

SAGARA : ಗಣಪತಿ ಕೆರೆ ಅಭಿವೃದ್ಧಿ ಕಾರ್ಯದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ಸಾರ್ವಜನಿಕರು ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಇಲಾಖೆ ಸಚಿವರು ತನಿಖೆ ನಡೆಸುವ ಕುರಿತು ಯೋಚಿಸಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಗಣಪತಿ ಕೆರೆ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕೆರ ಅಭಿವೃದ್ಧಿ ಕಾಮಗಾರಿಯಲ್ಲಿ ಹಣ ದುರುಪಯೋಗ ಆಗಿರುವ ಶಂಕೆ ಇದೆ. ಈ ಹಿನ್ನೆಲೆ ತನಿಖೆ ನಡೆಯುವ ಸಾಧ್ಯತೆ ಇದೆ. ಇನ್ನು, ಕೆರೆ ಒತ್ತುವರಿ ತೆರವಿಗೆ ನ್ಯಾಯಾಲಯ ಸೂಚಿಸಿದರೆ ಹಿಂಜರಿಕೆ ಇಲ್ಲದೆ ಕ್ರಮ ಕೈಗೊಳ್ಳುವಂತೆ ಅಧಕಾರಿಗಳಿಗೆ ತಿಳಿಸಲಾಗುತ್ತದೆ ಎಂದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್‌ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment