ಶಿವಮೊಗ್ಗ ಲೈವ್.ಕಾಂ | SAGARA NEWS | 04 FEBRUARY 2021
ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಮೊಬೈಲ್ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ.
ಕಳೆದ ಕೆಲವು ದಿನದಿಂದ ದೊಡ್ಡ ಸಂಖ್ಯೆಯಲ್ಲಿ ನೀರು ನಾಯಿಗಳು ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾಗಿವೆ. ಕೆರೆಯಲ್ಲಿ ಇರುವ ಮೀನುಗಳನ್ನ ಹಿಡಿದು ತಿನ್ನುತ್ತಿರುವ ನೀರು ನಾಯಿ, ಸ್ಥಳೀಯರ ಆಕರ್ಷಣೆಯಾಗಿವೆ.
ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾದ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಮೀನುಗಾರಿಕೆ ಗುತ್ತಿಗೆ ಪಡೆದವರಿಗೆ ಸಂಕಷ್ಟ
ಗಣಪತಿ ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದವರಿಗೆ ನೀರು ನಾಯಿಗಳು ಭಾರಿ ಸಂಕಷ್ಟ ತಂದೊಡ್ಡಿದೆ. ಗೆಂಡೆ, ಕಾಟ್ಲಾ, ಗೌರಿ, ಮೃಗಾಲ, ರೋವು, ಬೆಳ್ಳಿಗೆಂಡೆ, ಹುಲ್ಲುಗೆಂಡೆ ಜಾತಿಯ ಮೀನುಗಳನ್ನು ಕೆರೆಯಲ್ಲಿ ಬಿಡಲಾಗಿದೆ. ಪ್ರತಿ ಮೀನು ಈಗ 10 ರಿಂದ 12 ಕೆಜಿ ತೂಗುತ್ತವೆ. ಆದರೆ ನೀರು ನಾಯಿಗಳ ಗುಂಪು ಪ್ರತಿದಿನ ನೂರಾರು ಮೀನುಗಳನ್ನು ಹಿಡಿದು ತಿನ್ನುತ್ತಿವೆ.
ಮೀನುಗಾರರ ಸಹಕಾರ ಸಂಘದವರು ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದಿದ್ದಾರೆ. ಈ ಕುರಿತು ಮಾತನಾಡಿದ ಮೀನುಗಾರರಾದ ಭೈರಪ್ಪ, ಕೆರೆ ಸ್ವಚ್ಚವಾಗಿದೆ. ನೀರು ನಾಯಿಗಳಿಗೆ ಮೀನು ಸುಲಭವಾಗಿ ಕಾಣಿಸುತ್ತವೆ. ಪ್ರತಿದಿನ ನೀರು ನಾಯಿಗಳು ಅವುಗಳನ್ನು ಹಿಡಿದು ತಿನ್ನುತ್ತಿವೆ. ನಾವು ಬಲೆ ಹಾಕಿದರೆ ಬೆರಳೆಣಿಕೆಯಷ್ಟು ಮೀನುಗಳು ಮಾತ್ರ ಸಿಗುತ್ತಿವೆ. ಹಾಗಾಗಿ ಅವುಗಳನ್ನು ಓಡಿಸಲು ಯತ್ನಿಸುತ್ತಿದ್ದೇವೆ’ ಅನ್ನುತ್ತಾರೆ.
ನೀರು ನಾಯಿಗಳ ಗುಂಪು ಹೆಚ್ಚು ಸಮಯ ಒಂದೆ ಕಡೆ ಇರುವುದಿಲ್ಲ. ಒಂದೆಡೆಯಿಂದ ಮತ್ತೊಂದು ಕಡೆಗೆ ತೆರಳುತ್ತಿರುತ್ತವೆ. ಸದಾ ಗುಂಪಿನಲ್ಲಿ ಕಾಣಿಸಿಕೊಳ್ಳುತ್ತವೆ.
Photo | Jameel Sagar
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200