ಶಿವಮೊಗ್ಗ ಲೈವ್.ಕಾಂ | 8 ಏಪ್ರಿಲ್ 2019

ರಸ್ತೆ ಮಾಡಿಸಿಲ್ಲ. ನೀರು ಕೊಟ್ಟಿಲ್ಲ. ಕರೆಂಟ್ ಇರಲ್ಲ. ಹೀಗೆ ಮೂಲಸೌಕರ್ಯಗಳಿಲ್ಲ ಎಂಬ ಕಾರಣಕ್ಕೆ ಚುನಾವಣೆ ಬಹಿಷ್ಕರಿಸುವುದು ಸಾಮಾನ್ಯ. ಆದರೆ ಇಲ್ಲಿ, ಜ್ಯೋತಿಷಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಲು ನಿರ್ಧರಿಸಿದೆ.
![]() |
ಸಾಗರ ತಾಲೂಕಿನ ಹಿರೇಮನೆ ಗ್ರಾಮದಲ್ಲಿ 22 ಕುಟುಂಬದ 60 ಮಂದಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಹತ್ತು ವರ್ಷದಿಂದ ಜ್ಯೋತಿಷಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ. ಕೋರ್ಟ್’ಗೆ ಅಲೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿ, ಚುನಾವಣೆಯನ್ನೇ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
ಜ್ಯೋತಿಷಿಯಿಂದ ಆಗುತ್ತಿರುವ ಸಮಸ್ಯೆಯೇನು?
ಹಿರೇಮನೆ ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಮೂರು ಎಕರೆ ಜಾಗಕ್ಕೆ ಜ್ಯೋತಿಷಿಯೊಬ್ಬರು ಬೇಲಿ ಹಾಕಿಕೊಂಡಿದ್ದರು. ಈ ಕುರಿತು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಹಶೀಲ್ದಾರ್, ಇದು ಸರ್ಕಾರಿ ಜಾಗ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಬೇಲಿಯನ್ನು ತೆಗೆಸಿದ್ದರು. ಆದರೆ ಗ್ರಾಮಸ್ಥರೇ ಬೇಲಿ ತೆಗೆಸಿದ್ದಾರೆ ಎಂದು ಆರೋಪಿಸಿ, ಜ್ಯೋತಿಷಿ ಕೋರ್ಟ್ ಮೆಟ್ಟಲೇರಿದ್ದಾರೆ. 2010ರಲ್ಲಿ ನಡೆದ ಘಟನೆಗೆ ಈವರೆಗೂ ಗ್ರಾಮಸ್ಥರು ಸಾಗರ ಕೋರ್ಟ್’ಗೆ ಅಲೆಯುವಂತಾಗಿದೆ.
2018ರಲ್ಲಿ ಸೊಪ್ಪಿನ ಬೆಟ್ಟದಲ್ಲಿ 11 ಎಕರೆ ಸರ್ಕಾರಿ ಜಾಗಕ್ಕೆ ಬೇಲಿ ಹಾಕಿದ್ದಾರೆ. ಅಧಿಕ ಹಿಡುವಳಿದಾರರಾಗಿದ್ದರೂ ಬಗರ್ ಹುಕುಂ ಅರ್ಜಿ ಸಲ್ಲಿಸಿದ್ದಾರೆ. ಆ ಜಾಗದಲ್ಲಿ ಬೃಹತ್ ಕಟ್ಟಡ ನಿರ್ಮಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ದೂರು ನೀಡಿದ್ದರು. ಇದರಿಂದ ಜ್ಯೋತಿಷಿಯು, 33 ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200