ಸಾಗರ ತಾಲೂಕಿನಲ್ಲಿ ಜುಲೈ 8ರಂದು ಮತ್ತೆ ರಜೆ, ಯಾರಿಗೆಲ್ಲ ರಜೆ ಅನ್ವಯ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಸಾಗರ: ತಾಲೂಕಿನಾದ್ಯಂತ ಮಳೆಯ ಅಬ್ಬರ ತೀವ್ರವಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜುಲೈ 8ರಂದು ರಜೆ ಘೋಷಿಸಿ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಆದೇಶಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ತಹಶೀಲ್ದಾರ್‌ ಆದೇಶದಲ್ಲಿ ಏನಿದೆ?

ಸಾಗರ ತಾಲೂಕಿನಲ್ಲಿ ಪ್ರಸ್ತುತ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಜುಲೈ 8ರಂದು ಸಾಗರ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ (ಪಿ.ಯು.) ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

SAGARA-NEWS-GRAPHICS-BY-SHIVAMOGGA-LIVE

ಈ ರಜಾ ದಿನದಂದು ನಡೆಯಬೇಕಾಗಿದ್ದ ತರಗತಿಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ. ಇನ್ನು, ಭಾರಿ ಮಳೆಯಿಂದಾಗಿ ಸಾಗರ ತಾಲೂಕಿನಲ್ಲಿ ಕಳೆ ಎರಡು ದಿನದಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!