ಸಾಗರದ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ, ಏನೆಲ್ಲ ಸೌಲಭ್ಯ ಇರಲಿದೆ? ಮೀಟಿಂಗ್‌ನಲ್ಲಿ ಏನೆಲ್ಲ ಚರ್ಚೆಯಾಯ್ತು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಸಾಗರ : ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು (Hospital) 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಸಾಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಶಾಸಕ ಬೇಳೂರು ಗೋಪಾಲಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದರು.

MLA-Beluru-Gopalakrishna-meeting-at-sagara

ಎಂಎಲ್‌ಎ ಏನೆಲ್ಲ ಹೇಳಿದರು?

300 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ವಸತಿ ಗೃಹಗಳು ಶಿಥಿಲಾವಸ್ಥೆಗೆ ತಲುಪಿವೆ. ಅವುಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು.

Parishrama advt 10 feb 2025 1

ಪಕ್ಕದ ತಾಲ್ಲೂಕುಗಳಿಂದಲೂ ಇಲ್ಲಿನ ಆಸ್ಪತ್ರೆಗೆ ರೋಗಿಗಳು ಬರುವುದರಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಪ್ರಯೋಗಾಲಯ ಸೇರಿ ವಿವಿಧ ಸೌಲಭ್ಯ ಕಲ್ಪಿಸಲಾಗುವುದು. ತುರ್ತು ಸಂದರ್ಭ ಎಲ್ಲ ರೀತಿ ಚಿಕಿತ್ಸೆ ದೊರೆಯುವಂತೆ ಆಸ್ಪತ್ರೆ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?

» ಸಾಗರದಲ್ಲಿ ಒಳಚರಂಡಿ ಕಾಮಗಾರಿಗೆ 70 ಕೋಟಿ ರೂ. ಮಂಜೂರು ಮಾಡಿಸಲಾಗಿತ್ತು. ಈತನಕ ಕಾಮಗಾರಿ ಮುಗಿದಿಲ್ಲ. 20 ಕೋಟಿ ರೂ. ಹೆಚ್ಚುವರಿ ಅನುದಾನ ಮಂಜೂರು ಮಾಡಿಸಲಾಗಿದೆ. ಭೂಸ್ವಾಧೀನಕ್ಕೆ 1 ಕೋಟಿ ರೂ. ಬಿಡುಗಡೆಯಾಗಿದೆ.

MLA Beluru Gopalakrishna meeting

» ದಿನದ 24 ತಾಸು ಕುಡಿಯುವ ನೀರು ಪೂರೈಸಲು 275 ಕೋಟಿ ರೂ. ವೆಚ್ಚದ ಹೊಸ ಯೋಜನೆ ರೂಪಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಹೊಸ ಪೈಪ್‌ಲೈಲ್ ಅಳವಡಿಸಲಾಗುತ್ತದೆ. ಮನೆಮನೆಗೆ ಮೀಟರ್ ಅಳವಡಿಸಿ ನೀರು ಪೂರೈಸಲಾಗುವುದು.

» ಹೆಗ್ಗೋಡು, ಕಲ್ಮನೆ, ಆವಿನಹಳ್ಳಿ ಇತರ ಭಾಗಗಳಿಗೆ ಗುಬ್ಬಗೋಡು ಶರಾವತಿ ಹಿನ್ನೀರಿನಿಂದ ನೀರು ಪೂರೈಕೆ ಮಾಡಲು ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ಜಲಜೀವನ್ ಮಿಷನ್ ಕಾಮಗಾರಿ ಕೆಲವೆಡೆ ಕುಂಠಿತವಾಗಿದೆ. ಕೆಲಸ ಮಾಡಲು ಸಾಧ್ಯ ಆಗದಿದ್ದರೆ ಗುತ್ತಿಗೆದಾರರು ಕೆಲಸ ಕೈ ಬಿಡಲಿ, ನಾವು ಬೇರೆಯವರಿಗೆ ವಹಿಸುತ್ತೇವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಎಚ್ಚರಿಸಿದರು.

NATIONAL-PUBLIC-SCHOOL-scaled

ಇದನ್ನೂ ಓದಿ » ಆನಂದಪುರ ಸಮೀಪ ಆಕಸ್ಮಿಕ ಬೆಂಕಿಗೆ ಮನೆ ಹಾನಿ, ವಸ್ತುಗಳು ಆಹುತಿ

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್, ಸರ್ಕಾರಿ ಆಸ್ಪತ್ರೆ ವೈದ್ಯ ಕೆ. ಪರಪ್ಪ, ನೀರು, ನೈರ್ಮಲ್ಯ ಇಲಾಖೆ ಅಧಿಕಾರಿ ಗುರುಕೃಷ್ಣ ಶೆಣೈ, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ. ರಮೇಶ್ ಇದ್ದರು.

ಇದನ್ನೂ ಓದಿ » ಸಾಗರ ಪಟ್ಟಣ, ಮಾರ್ಚ್‌ 5ರವರೆಗೆ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಯಾಕೆ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment