ಸಾಗರ : ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು (Hospital) 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಸಾಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಶಾಸಕ ಬೇಳೂರು ಗೋಪಾಲಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಂಎಲ್ಎ ಏನೆಲ್ಲ ಹೇಳಿದರು?
300 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ವಸತಿ ಗೃಹಗಳು ಶಿಥಿಲಾವಸ್ಥೆಗೆ ತಲುಪಿವೆ. ಅವುಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು.
ಪಕ್ಕದ ತಾಲ್ಲೂಕುಗಳಿಂದಲೂ ಇಲ್ಲಿನ ಆಸ್ಪತ್ರೆಗೆ ರೋಗಿಗಳು ಬರುವುದರಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಪ್ರಯೋಗಾಲಯ ಸೇರಿ ವಿವಿಧ ಸೌಲಭ್ಯ ಕಲ್ಪಿಸಲಾಗುವುದು. ತುರ್ತು ಸಂದರ್ಭ ಎಲ್ಲ ರೀತಿ ಚಿಕಿತ್ಸೆ ದೊರೆಯುವಂತೆ ಆಸ್ಪತ್ರೆ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?
» ಸಾಗರದಲ್ಲಿ ಒಳಚರಂಡಿ ಕಾಮಗಾರಿಗೆ 70 ಕೋಟಿ ರೂ. ಮಂಜೂರು ಮಾಡಿಸಲಾಗಿತ್ತು. ಈತನಕ ಕಾಮಗಾರಿ ಮುಗಿದಿಲ್ಲ. 20 ಕೋಟಿ ರೂ. ಹೆಚ್ಚುವರಿ ಅನುದಾನ ಮಂಜೂರು ಮಾಡಿಸಲಾಗಿದೆ. ಭೂಸ್ವಾಧೀನಕ್ಕೆ 1 ಕೋಟಿ ರೂ. ಬಿಡುಗಡೆಯಾಗಿದೆ.
» ದಿನದ 24 ತಾಸು ಕುಡಿಯುವ ನೀರು ಪೂರೈಸಲು 275 ಕೋಟಿ ರೂ. ವೆಚ್ಚದ ಹೊಸ ಯೋಜನೆ ರೂಪಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಹೊಸ ಪೈಪ್ಲೈಲ್ ಅಳವಡಿಸಲಾಗುತ್ತದೆ. ಮನೆಮನೆಗೆ ಮೀಟರ್ ಅಳವಡಿಸಿ ನೀರು ಪೂರೈಸಲಾಗುವುದು.
» ಹೆಗ್ಗೋಡು, ಕಲ್ಮನೆ, ಆವಿನಹಳ್ಳಿ ಇತರ ಭಾಗಗಳಿಗೆ ಗುಬ್ಬಗೋಡು ಶರಾವತಿ ಹಿನ್ನೀರಿನಿಂದ ನೀರು ಪೂರೈಕೆ ಮಾಡಲು ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ಜಲಜೀವನ್ ಮಿಷನ್ ಕಾಮಗಾರಿ ಕೆಲವೆಡೆ ಕುಂಠಿತವಾಗಿದೆ. ಕೆಲಸ ಮಾಡಲು ಸಾಧ್ಯ ಆಗದಿದ್ದರೆ ಗುತ್ತಿಗೆದಾರರು ಕೆಲಸ ಕೈ ಬಿಡಲಿ, ನಾವು ಬೇರೆಯವರಿಗೆ ವಹಿಸುತ್ತೇವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಎಚ್ಚರಿಸಿದರು.
ಇದನ್ನೂ ಓದಿ » ಆನಂದಪುರ ಸಮೀಪ ಆಕಸ್ಮಿಕ ಬೆಂಕಿಗೆ ಮನೆ ಹಾನಿ, ವಸ್ತುಗಳು ಆಹುತಿ
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್, ಸರ್ಕಾರಿ ಆಸ್ಪತ್ರೆ ವೈದ್ಯ ಕೆ. ಪರಪ್ಪ, ನೀರು, ನೈರ್ಮಲ್ಯ ಇಲಾಖೆ ಅಧಿಕಾರಿ ಗುರುಕೃಷ್ಣ ಶೆಣೈ, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ. ರಮೇಶ್ ಇದ್ದರು.
ಇದನ್ನೂ ಓದಿ » ಸಾಗರ ಪಟ್ಟಣ, ಮಾರ್ಚ್ 5ರವರೆಗೆ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಯಾಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200