ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SAGARA NEWS | 19 NOVEMBER 2020
ಕರ್ನಾಟಕದಲ್ಲಿ ಕನ್ನಡ ಭಾಷೆ ಹೊರತುಪಡಿಸಿ ಇತರೆ ಯಾವುದೆ ಪ್ರಧಿಕಾರವನ್ನು ರಚಿಸುವುದು ಬೇಡ ಎಂದು ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಉಳಿದ ಭಾಷಿಕರ ಪ್ರಾಧಿಕಾರ ರಚನೆಯಿಂದ ಕನ್ನಡ ಭಾಷೆ ಬೆಳವಣಿಗೆ ಕುಂಠಿತವಾಗಲಿದೆ. ಆದ್ದರಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕರ್ನಾಟಕ ಮರಾಠ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಎಂದು ಬದಲಾಯಿಸಬೇಕು. ಆಯಾ ಪ್ರದೇಶದ ಅಭಿವೃದ್ಧಿ ಮಾಡಬೇಕು ಎಂದು ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು.
ಮಹಾರಾಷ್ಟ್ರ ಆಕ್ರಮಿಸಿಕೊಂಡಿರುವ ಕೊಲ್ಲಾಪುರ, ಸಾಂಗ್ಲಿ, ಸೊಲ್ಲಾಪುರ, ಲಾತೂರು, ನಾದಿರ್ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು. ಕೇರಳ ಆಕ್ರಮಿಸಿಕೊಂಡಿರುವ ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸುವತ್ತ ಸರ್ಕಾರ ಗಮನ ಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ಮ.ಸ.ನಂಜುಂಡಸ್ವಾಮಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಿತಕರ ಜೈನ್, ಪ್ರಧಾನ ಕಾರ್ಯದರ್ಶಿ ಮೇಜರ್ ನಾಗರಾಜ್, ಎಸ್.ಎಂ.ಗಣಪತಿ, ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಅಧ್ಯಕ್ಷ ವೈ.ಮೋಹನ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422