ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SAGARA NEWS | 12 APRIL 2021
ಸಾಗರದಲ್ಲೂ ಕೆಎಸ್‌ಆರ್‌ಟಿಸಿ ನೌಕರರು ತಮ್ಮ ಕುಟುಂಬದೊಂದಿಗೆ ತಟ್ಟೆ, ಲೋಟ ಬಾರಿಸುವ ಚಳವಳಿ ನಡೆಸಿದರು.
ಜೋಗ ಬಸ್ ನಿಲ್ದಾಣದಿಂದ ಉಪ ವಿಭಗಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಮಹಿಳೆಯರು, ಮಕ್ಕಳು ಈ ಚಳವಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ
ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಸರ್ಕಾರ ಹಾಗೂ ಸಾರಿಗೆ ಸಚಿವರ ವಿರುದ್ಧ ಕಿಡಿ ಕಾರಿದರು. ನಿಮ್ಮಿಂದ ಇಂದು ನಾವು ಬೀದಿಗೆ ಬಂದಿದ್ದೇವೆ. ಮಾರ್ಚ್ ತಿಂಗಳ ಸಂಬಳ ನೀಡಿಲ್ಲ. ತಿನ್ನೋಕೆ ಅನ್ನ ಇಲ್ಲ. ನಾವು ಇಂದು ಇಲ್ಲಿ ಕೂತಿದ್ದೇವೆ ಅಂದರೆ ಅದಕ್ಕೆ ನೀವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಉಪ ವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com



