ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ (Marikamba Jathre) ಇಂದಿನಿಂದ ಆರಂಭವಾಗಲಿದೆ. ತವರು ಮನೆಯಲ್ಲಿ ತಾಯಿ ದರ್ಶನ ನೀಡುತ್ತಿದ್ದು, ರಾತ್ರಿಯಿಂದಲೇ ಸಾವಿರಾರು ಜನರು ಸರತಿಯಲ್ಲಿ ನಿಂತು ದೇವಿಯನ್ನು ಕಣ್ತುಂಬಿಕೊಂಡರು.
ಇವತ್ತು ಸಾಗರದ ಮಹಾಗಣಪತಿ ದೇವಸ್ಥಾನದಲ್ಲಿ ಮಾಂಗಲ್ಯ ಪೂಜೆ, ಬ್ರಾಹ್ಮಿ ಮುಹೂರ್ತದಲ್ಲಿ ತಾಯಿಗೆ ದೃಷ್ಟಿ ಇಡುವುದು, ಮಾಂಗಲ್ಯ ಧಾರಣೆ ಕಾರ್ಯಕ್ರಮ ನಡೆಯಿತು. ಬೆಳಗಿನ ಜಾವ 3 ಗಂಟೆಗೆ ಅರ್ಚಕರ ಮನೆಯಲ್ಲಿ ಪೂಜೆ ನಡೆಯಿತು. ಬಳಿಕ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಮಂಗಳ ದ್ರವ್ಯ ತರಲಾಯಿತು. ದೇವಿಯ ತವರು ಮನೆಯಲ್ಲಿ ಉತ್ಸವ ಮೂರ್ತಿಗೆ ಆಭರಣ ತೊಡಿಸಿ ಪೂಜೆ ಸಲ್ಲಿಸಲಾಯಿತು.

ರಾತ್ರಿಯಿಂದಲೇ ಕಾದು ಕುಳಿತ ಭಕ್ತರು
ಮಾರಿಕಾಂಬೆಯ ದರ್ಶನಕ್ಕೆ ಕಳೆದ ರಾತ್ರಿಯಿಂದಲೆ ಭಕ್ತರು ಸರತಿಯಲ್ಲಿ ಕಾದು ಕುಳಿತಿದ್ದರು. ರಾತ್ರಿ 10 ಗಂಟೆ ಹೊತ್ತಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆವರೆಗೆ ಸರತಿ ಸಾಲು ತಲುಪಿತ್ತು. ಮಧ್ಯರಾತ್ರಿ ಹೊತ್ತಿಗೆ ಸಾಗರ ಪೊಲೀಸ್ ಠಾಣೆ ವೃತ್ತದೆವರೆಗೆ ಸರತಿ ಸಾಲು ಬೆಳೆದಿತ್ತು. ಬೆಳಗ್ಗೆ ದೇವಿಯ ಪ್ರಥಮ ದರ್ಶನವಾಗುತ್ತಿದ್ದಂತೆ ಭಕ್ತರು ಘೋಷಣೆಗಳನ್ನು ಕೂಗುತ್ತ ದೇವಿಗೆ ನಮಸ್ಕರಿಸಿದರು.

ಒಂಭತ್ತು ದಿನದ ವೈಭವದ ಜಾತ್ರೆ
ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. 9 ದಿನದ ಜಾತ್ರೆ ಅವಧಿಯಲ್ಲಿ ತಾಯಿಯು ಒಂದು ದಿನ ತವರು ಮನೆಯಲ್ಲಿ, 8 ದಿನ ಗಂಡನ ಮನೆಯಲ್ಲಿ ದರ್ಶನ ನೀಡುತ್ತಾಳೆ. ದೇವಿಯನ್ನು ಕಣ್ತುಂಬಿಕೊಳ್ಳಲು, ಆಕೆಯ ಆಶೀರ್ವಾದ ಪಡೆಯಲು ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





