ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 FEBRURARY 2023
SAGARA : ಶ್ರೀ ಮಾರಿಕಾಂಬ ದೇವಿಯನ್ನು (Marikamba Jatre) ವೈಭವಯುತ ರಾಜಬೀದಿ ಉತ್ಸವದೊಂದಿಗೆ ವನಕ್ಕೆ ಬಿಡುವ ಕಾರ್ಯಕ್ರಮದ ನಡೆಯಿತು. ಈ ಮೂಲಕ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಸಂಪನ್ನಗೊಂಡಿದೆ.
ಒಂಬತ್ತು ದಿನಗಳ ವಿಶೇಷ ಪೂಜಾ ವಿಧಿ ವಿಧಾನಗಳ ನಂತರ ಬುಧವಾರ ರಾತ್ರಿ ಶ್ರೀ ಮಾರಿಕಾಂಬಾ ಜಾತ್ರೆಯು ಮುಕ್ತಾಯಗೊಂಡಿದೆ. ಬುಧವಾರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ಮಾರಿಕಾಂಬಾ ದೇವಿಯ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಬಳಿಕ ವನಕ್ಕೆ ಬಿಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ, ಹರಿದು ಬಂತು ಲಕ್ಷ ಲಕ್ಷ ಕಾಣಿಕೆ
ರಾಜಬೀದಿ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು. ಡೊಳ್ಳು ತಂಡಗಳು, ವೇಷಭೂಷಣಗಳ ನೃತ್ಯ ಕಲಾವಿದರು, ವಿವಿಧ ವಾದ್ಯಗಳ ತಂಡದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಾವಿರಾರು ಜನರು ಮಧ್ಯರಾತ್ರಿ ಆರಂಭಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡರು.