‘ವರಿಷ್ಠರ ಭೇಟಿಗೆ ದೆಹಲಿಗೆ ತೆರಳುವೆ’, ಸಚಿವ ಸ್ಥಾನದ ಬಗ್ಗೆ ಸಾಗರ ಎಂಎಲ್‌ಎ ಏನಂದ್ರು?

ಸಾಗರ: ನಾನು ಹಿರಿಯ ಶಾಸಕ. ನನಗೆ ಸಚಿವ (Minister) ಸ್ಥಾನ ಸಿಗುವ ವಿಶ್ವಾಸ ಇದೆ. ಅಗತ್ಯ ಬಿದ್ದರೆ ವರಿಷ್ಠರ ಭೇಟಿಗೆ ಹೊಸದಿಲ್ಲಿಗೂ ತೆರಳುವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೃಢವಾಗಿ ಹೇಳಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ಹಿಂದೆ ಹೊಸದಿಲ್ಲಿಗೆ ಹೋಗಿದ್ದಾಗ ವರಿಷ್ಠರಿಗೆ ಮನವಿ ಮಾಡಿದ್ದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಳಿಯೂ ಕೇಳಿದ್ದೇನೆ. ನನ್ನ ಹಕ್ಕನ್ನು ಕೇಳಲು ಮುಜುಗರವಿಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈಯಲ್ಲಿ ಇಲ್ಲ. ಹೈಕಮಾಂಡ್ ತೀರ್ಮಾನವೆ ಅಂತಿಮ. ಅದಕ್ಕೆ ನಾವು ಬದ್ಧ. ಸರ್ಕಾರ ಐದು ವರ್ಷ ಸುಸೂತ್ರವಾಗಿ ನಡೆಯಬೇಕು ಎನ್ನುವುದು ಎಲ್ಲರ ಆಶಯವಾಗಿದೆ ಎಂದರು.

Beluru-Gopalakrishna-in-a-press-meet

ಇದನ್ನೂ ಓದಿ » ರಿಪ್ಪನ್‌ಪೇಟೆಯಲ್ಲಿ ರಂಭಾಪುರಿ ಶ್ರೀ ಆಶೀರ್ವಚನ, ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

Minister

Leave a Comment