ಶಿವಮೊಗ್ಗ ಲೈವ್.ಕಾಂ | SAGARA NEWS | 23 ಜುಲೈ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕೆಳೆದ ಎರಡು ದಿನದಿಂದ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿದೆ.
ಕೆಳದಿ ರಸ್ತೆಯ ಮೇಲೆ ನೀರು
ಚರಂಡಿಗಳು ಭರ್ತಿಯಾಗಿ ಕೆಳದಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಅಕ್ಕಪಕ್ಕದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರಿಗೆ ನೆರವಾಗುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಬಡಾವಣೆಗೆ ನುಗ್ಗಿದ ನೀರು
ಇಲ್ಲಿನ ವಿನೋಬನಗರದ ಲೇಔಟ್ ಒಂದಕ್ಕೆ ನೀರು ನುಗ್ಗಿದೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ವರದಿಯಾಗಿದೆ.

ಶಾಸಕರಿಂದ ಸಿಟಿ ರೌಂಡ್ಸ್
ಭಾರಿ ಮಳೆ ಹಿನ್ನೆಲೆ ಸಾಗರ ಶಾಸಕ ಹರತಾಳು ಹಾಲಪ್ಪ ಬೆಳಗ್ಗೆಯಿಂದ ಪಟ್ಟಣದ ವಿವಿಧೆಡೆ ರೌಂಡ್ಸ್ ಹಾಕಿದ್ದಾರೆ. ಜಲಾವೃತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು, ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.
ಪುನರ್ವಸತಿ ಕೇಂದ್ರ ಆರಂಭ
ಭಾರಿ ಮಳೆ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಪುನರ್ವಸತಿ ಕೇಂದ್ರ ತೆರೆಯಲಾಗಿದೆ ಎಂದು ಶಾಸಕರ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ. 9480010111 ನಂಬರ್‍ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






