ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020
ಕರೋನ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣ ನಡೆಯುತ್ತಿದ್ದು, ಶ್ರೀಮಂತ ಮಕ್ಕಳಿಗಷ್ಟೆ ಇದು ಅನುಕೂಲವಾಗುತ್ತಿದೆ. ಬಡ ಮಕ್ಕಳು ಇದರಿಂದ ವಂಚಿತವಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಹೊಸ ಟಿವಿ ಚಾನೆಲ್ ಆರಂಭಿಸಿ, ಎಲ್‍ಕೆಜಿಯಿಂದ ಪದವಿವರೆಗೆ ಬೋಧನೆ ಮಾಡಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕು ಪಂಚಾಯಿತಿಯಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಪ್ರತೇಕ ಟಿವಿ ಚಾನೆಲ್ ಮೂಲಕ ಬೋಧನೆ ಮಾಡಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಎಂದು ತಿಳಿಸಿದರು.
ಶಾಲೆ ಬಿಡುವ ಮಕ್ಕಳ ಬಗ್ಗೆ ನಿಗಾ
ಸುದೀರ್ಘ ರಜೆ ಇದೆ. ಒಮ್ಮೆಲೆ ಶಾಲೆ ಆರಂಭವಾದರೆ ಮಕ್ಕಳ ಹಾಜರಾತಿ ಕುಸಿತ ಕಾಣಬಹುದು. ಹಾಗಾಗಿ ನೋಡಲ್ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಶಾಲೆ ಬಿಟ್ಟ ಮಕ್ಕಳು, ಬೇರೆಡೆ ಟಿ.ಸಿ.ತೆಗೆದುಕೊಂಡು ಹೋಗುವವರ ಕುರಿತು ಮಾಹಿತಿ ಪಡೆಯಬೇಕು. ಇನ್ನು, ಶಾಲೆಗಳು ಆರಂಭವಾದರೆ ಮಕ್ಕಳನ್ನು ಶಾಲೆಗಳತ್ತ ಸೆಳೆಯುವ ಕುರಿತು ಯೋಜಿಸಬೇಕು ಎಂದು ಮಲ್ಲಿಕಾರ್ಜುನ ಹಕ್ರೆ ತಿಳಿಸಿದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಬಿಇಒ ಕೆ.ಆರ್.ಬಿಂಬಾ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಾಲಸುಬ್ರಹ್ಮಣ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೀಶ್, ಶೇಖರಪ್ಪ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ವರ ನಾಯ್ಕ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕೆ.ಬಿ.ಪ್ರಸನ್ನ ಸೇರಿದ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]