ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 1 ಫೆಬ್ರವರಿ 2020
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಲು ಹನ್ನೊಂದು ಸದಸ್ಯರು ಜಿಲ್ಲಾಧಿಕಾರಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ನೋಟಿಸ್ ನೀಡಿದ್ದಾರೆ.
ನಾಲ್ಕು ತಿಂಗಳಿನಿಂದ ಸಭೆಯನ್ನೇ ಕರೆದಿಲ್ಲ. ಅಧ್ಯಕ್ಷರ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಬೇಕು ಎಂದು ಮನವಿ ಮಾಡಿದ್ದಾರೆ.
ಬಿಜೆಪಿಯ 6, ಕಾಂಗ್ರೆಸ್ ಮತ್ತು ಜೆಡಿಎಸ್‌ನ ತಲಾ ಒಬ್ಬರು, ಮೂವರು ಪಕ್ಷೇತರರು ಸಹಿ ಮಾಡಿದ ಪತ್ರವನ್ನು ತಾಪಂ ಇಒಗೆ ಸಲ್ಲಿಸಲಾಗಿದೆ. ತಾಪಂನಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಇಲ್ಲದಿದ್ದರೂ ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರ ಬೆಂಬಲದಿಂದ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜು ಹಕ್ರೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರನ್ನು ಬೆಂಬಲಿಸಿದ್ದ ಮೂವರು ಪಕ್ಷೇತರರು, ಒಬ್ಬ ಜೆಡಿಎಸ್ ಸದಸ್ಯ ಮತ್ತು ಒಬ್ಬ ಕಾಂಗ್ರೆಸ್ ಸದಸ್ಯ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯಲು ಒತ್ತಾಯಿಸಿದವರಲ್ಲಿ ಸೇರಿದ್ದಾರೆ.
4 ತಿಂಗಳಿನಿಂದ ಸಭೆ ಕರೆಯದ ಕಾರಣವೇ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾರಣ ಎಂದು ಮೇಲ್ನೋಟಕ್ಕೆ ಹೇಳಲಾಗುತ್ತಿದೆ. ಆದರೆ ಒಪ್ಪಂದದ ಪ್ರಕಾರ 30 ತಿಂಗಳು ಅಧಿಕಾರ ಮುಗಿಯುತ್ತಿದ್ದಂತೆ ಮಲ್ಲಿಕಾರ್ಜುನ ಹಕ್ರೆ ರಾಜೀನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ನೀಡಬೇಕಿತ್ತು. ಆದರೆ ಅವರು ರಾಜೀನಾಮೆ ನೀಡಿಲ್ಲ. ಇದುವೆ ಅವಿಶ್ವಾಸ ಮಂಡನೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422