ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 20 ಏಪ್ರಿಲ್ 2020
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರ ಅಸಮಾಧಾನ ಮತ್ತೊಂದು ಹಂತಕ್ಕೆ ತಲುಪಿದೆ. ಇವತ್ತು ಅಧ್ಯಕ್ಷರ ಕೊಠಡಿಗೆ ಸದಸ್ಯರೆ ಬೀಗ ಹಾಕಿ ಪ್ರತಿರೋಧ ತೋರಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೀಗ ಹಾಕಲು ಕಾರಣವೇನು?
ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನಾಲ್ಕು ವರ್ಷದಿಂದ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹನ್ನೊಂದು ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ಸಂಬಂಧ ಎರಡು ಸಭೆಗಳನ್ನು ನಡೆಸಲಾಗಿದೆ. ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಒಂದು ಸಭೆಯಲ್ಲಿ ಮೂವರು ಸದಸ್ಯರನ್ನು ಅಮಾನತು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಸದಸ್ಯರೊಬ್ಬರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಲಾಗಿದೆ. ಹೀಗಿದ್ದೂ ಹಿರಿಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಅದ್ದರಿಂದ ಅಧ್ಯಕ್ಷರ ಕೊಠಡಿಗೆ ಬೀಗ ಹಾಕಲಾಗುತ್ತಿದೆ ಎಂದು ಸದಸ್ಯರು ಆರೋಪಿಸಿದರು.
ಅವಿಶ್ವಾಸ ಮಂಡನೆಯಾದರೂ ಕರೋನ ಸಭೆ
ಮಲ್ಲಿಕಾರ್ಜುನ ಹಕ್ರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರಿಂದ ಅವರ ಅಧಿಕಾರ ಮೊಟಕುಗೊಂಡಿದೆ. ಹೀಗಿದ್ದೂ ಕರೋನ ವಿಚಾರವಾಗಿ ಇಲಾಖೆ ವಾಹನಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುತ್ತಿದ್ದಾರೆ. ಸಭೆಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]