ಶಿವಮೊಗ್ಗ ಲೈವ್.ಕಾಂ | SAGARA NEWS | 27 MAY 2021
ಸೋಂಕು ಹರಡುವುದನ್ನು ತಡೆಯಲು ಸಾಗರ ತಾಲೂಕು ತ್ಯಾಗರ್ತಿ ಮತ್ತು ಹಿರೇಬಿಲಗುಂಜಿಯಲ್ಲಿ ಲಾಕ್ ಡೌನ್ ಘೋಷಿಸಿ, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನಹಾಳ್ ನೇತೃತ್ವದಲ್ಲಿ ಹಿರರೇಬಿಲಗುಂಜಿ ಮತ್ತು ತ್ಯಾಗರ್ತಿ ಗ್ರಾಮ ಪಂಚಾಯಿತಿಯ ಸದಸ್ಯರು, ಅಧಿಕಾರಿಗಳು, ಕೋವಿಡ್ ಕಾರ್ಯಪಡೆ ಸದಸ್ಯರು ಸಭೆ ನಡೆಸಿ, ಈ ನಿರ್ಣಯ ಕೈಗೊಂಡಿದ್ದಾರೆ.
ಮೇ 28 ರಿಂದ ಜೂನ್ 3ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಈ ಅವಧಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿ ಹೊರತು ಇನ್ನಾವುದೆ ಕಾರಣಕ್ಕೂ ಜನರು ಹೊರಗೆ ಬರುವಂತಿಲ್ಲ.
ಈಗಾಗಲೇ ಸುತ್ತಮುತ್ತಲು ಗ್ರಾಮಗಳಾದ ಆನಂದಪುರ, ಗೌತಮಪುರ, ಹೊಸೂರು ವ್ಯಾಪ್ತಿಯಲ್ಲಿ ಲಾಕ್ ಡೌನ್ ಮಾಡಲಾಗಿದೆ.
ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಇಸಾಕ್, ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೋಮಶೇಖರ್ ಕುಣಕೆರೆ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಪ್ಪ, ಗಿರೀಶ್, ಪ್ರಶಾಂತ್, ಸುಜಾತ, ಪಾರ್ವತಿ, ನಾಗರಾಜ್, ಪರಶುರಾಮ್, ಹನುಮಂತ, ಪಿಡಿಓಗಳಾದ ಮಂಜಾನಾಯ್ಕ, ಅಶ್ಫಾಕ್ ಅಹಮದ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]