ಕಾಂಗ್ರೆಸ್‌ಗೆ ಸಾಗರದ ಪ್ರಶಾಂತ್ ಗುಡ್ ಬೈ, ಪಕ್ಷ ತೊರೆಯಲು 2 ಕಾರಣ, ಬಿಜೆಪಿ ಸೇರ್ಪಡೆ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 NOVEMBER 2022

SAGARA | ಮಹತ್ವದ ಬೆಳವಣಿಗೆ ಒಂದರಲ್ಲಿ ಸಾಗರ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ (youth leader) ಪ್ರಶಾಂತ್.ಕೆ.ಎಸ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಬಿಜೆಪಿ ಸೇರ್ಪಡೆ ಆಗುವುದು ಖಚಿತವಾಗಿದೆ.

Atiyas Showroom Shimoga

ಕಾಂಗ್ರೆಸ್ ಪಕ್ಷದಿಂದ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಶಾಂತ್.ಕೆ.ಎಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಶಾಂತ್ ಅವರು, ‘ಕಾಂಗ್ರೆಸ್ ಪಕ್ಷ ತೊರೆದಿರುವುದು ನಿಜ. ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ದಿನಾಂಕ ನಿಗದಿಯಾಗಬೇಕಿದೆ’ ಎಂದು ತಿಳಿಸಿದರು.

(youth leader)

ಹಿಂದು ಜಾಗರಣ ವೇದಿಕೆಯಲ್ಲಿ

ಶಿವಮೊಗ್ಗದಲ್ಲಿ ಇವತ್ತು ಹಿಂದೂ ಜಾಗರಣ ವೇದಿಕೆ ಪ್ರಾಂತ್ಯ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ ನಡೆಯಿತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಕೆ.ಎಸ್.ಪ್ರಶಾಂತ್ ಅವರು ಉಪಸ್ಥಿತರಿದ್ದರು.

(youth leader)

ಹಳ್ಳಿ ಹಳ್ಳಿಯಲ್ಲಿ ಪ್ರಚಾರ ಮಾಡಿದ್ದರು

ಕೆ.ಎಸ್.ಪ್ರಶಾಂತ್ ಅವರು ಶಿವಮೊಗ್ಗದ ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ. ಕಳೆದ ಒಂದೆರಡು ವರ್ಷದಿಂದ ಸಾಗರ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಪ್ರಚಾರ ನಡೆಸಿದ್ದರು. ತಮಗೆ ಅವಕಾಶ ನೀಡುವಂತೆ ಜನರಿಗೆ ಮನವಿ ಮಾಡುತ್ತಿದ್ದರು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗೆ ಅರ್ಜಿ ಸಲ್ಲಿಸದೆ ಕುತೂಹಲ ಮೂಡಿಸಿದ್ದರು. ಈಗ ಅವರು ಬಿಜೆಪಿ ಸೇರ್ಪಡೆ ಆಗುತ್ತಿರುವುದಾಗಿ ತಿಳಿಸಿದ್ದಾರೆ.

(youth leader)

ಕಾಂಗ್ರೆಸ್ ತೊರೆಯಲು ಕಾರಣವೇನು?

ಕಾಂಗ್ರೆಸ್ ಪಕ್ಷ ತೊರೆಯಲು ಕೆ.ಎಸ್.ಪ್ರಶಾಂತ್ ಅವರು 2 ಪ್ರಮುಖ ಕಾರಣ ತಿಳಿಸಿದ್ದಾರೆ.

ಕಾರಣ 1 – ‘ಈತನಕ ಕಾಂಗ್ರೆಸ್ ಪಕ್ಷದಿಂದ ನಾನು ಪ್ರಚಾರ ಮಾಡಿದ್ದು ನಿಜ. ಈಗ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ ಅನ್ನುವುದು ಅಷ್ಟೇ ನಿಜ. ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಭವಿಷ್ಯವಿಲ್ಲ. ನಮ್ಮ ಭವಿಷ್ಯವನ್ನು ನೋಡಬೇಕು ಅನ್ನುವುದು ಎಷ್ಟು ನಿಜವೋ, ರಾಜ್ಯದ, ನಾಡಿನ ಭವಿಷ್ಯನ್ನು ಗಮನಿಸಬೇಕಿದೆ. ಆ ಕಾರಣಕ್ಕಾಗಿ ಬಿಜೆಪಿ ಕಡೆ ಮುಖ ಮಾಡಿದ್ದೇನೆ’

ಕಾರಣ 2 – ‘ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಯುವಕರನ್ನು ಸಂಘಟನೆ ಮಾಡಿದ್ದೆ. ಆದರೆ ಆ ಯುವಕರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶವಿಲ್ಲ. ಆದ್ದರಿಂದ ಎಲ್ಲರನ್ನು ಬಿಜೆಪಿಗೆ ಕರೆದೊಯ್ಯುತ್ತಿದ್ದೇನೆ. ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ.’

Shimoga Nanjappa Hospital

ಕುತೂಹಲ ಹುಟ್ಟಿಸಿದ ಬಿಜೆಪಿ ಟಿಕೆಟ್

ಬಿಜೆಪಿ ಸೇರ್ಪಡೆ ಬೆನ್ನಿಗೆ ಪ್ರಶಾಂತ್ ಅವರು ಸಾಗರದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆಯೆ ಎಂಬ ಕುತೂಹಲ ಮೂಡಿದೆ. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ರಾಜಕೀಯದಲ್ಲಿ ಎಲ್ಲವು ಒಲಿದು ಬರುತ್ತದೆ. ನಮ್ಮ ಪ್ರಯತ್ನ ಮಾಡಿದ್ದೇವೆ. ಯಾವುದೆ ಷರತ್ತುಗಳಿಲ್ಲದೆ ಬಿಜೆಪಿ ಸೇರ್ಪಡೆಯಾಗಿದ್ದೇನೆ’ ಎಂದು ತಿಳಿಸಿದರು.

ಇಂಧನ ಖಾತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಕೆ.ಎಸ್.ಪ್ರಶಾಂತ್ ಅವರ ಸಂಬಂಧಿ. ಈಗ ಪ್ರಶಾಂತ್ ಅವರು ಬಿಜೆಪಿ ಸೇರ್ಪಡೆ ಆಗುತ್ತಿರುವುದು ಸಾಗರದ ಕ್ಷೇತ್ರದ ವಿಧಾನಸಭೆ ಚುನಾವಣೆ ಕಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟಿಗೆ 42 ಅರ್ಜಿ, ಇಬ್ಬರಿಗೆ ಪ್ರತಿಸ್ಪರ್ಧಿಯೆ ಇಲ್ಲ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 23, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment