ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SAGARA NEWS | 15 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಂಕ್ರಾಂತಿ ಹಬ್ಬದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚೌಡೇಶ್ವರಿ ದೇವಿಯ ಮೂಲ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ದೀಪ ತರಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸ್ಥಳ ಸೀಗೆಕಣಿವೆಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಮೂಲ ಸ್ಥಳದಿಂದ ದೇವಸ್ಥಾನಕ್ಕೆ ಜ್ಯೋತಿ
ಜಾತ್ರೆಗೆ ಧರ್ಮಸ್ಥಳದ ಕನ್ಯಾಡಿ ಮಠದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾಲನೆ ನೀಡಿದರು. ಅದಕ್ಕೂ ಮೊದಲು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಆಡಳಿತ ಮಂಡಳಿ ಕಾರ್ಯದರ್ಶಿ ರವಿಕುಮಾರ್ ಅವರು ಶ್ರೀಗಳನ್ನು ಬರಮಾಡಿಕೊಂಡರು. ಮೂಲ ಸ್ಥಳವಾದ ಸೀಗೆಕಣಿವೆಯಲ್ಲಿ ದೇವಿಗೆ ಶಾಸ್ರೋಕ್ತವಾಗಿ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ಜ್ಯೋತಿಯನ್ನು ತಂದು ವಿವಿಧ ಅಲಂಕಾರದ ಪೂಜೆ ಮಾಡಿ ಜಾತ್ರೆಗೆ ಚಾಲನೆ ನೀಡಲಾಯಿತು.
ಬಳಿಕ ದೇವಾಲಯ ಆವರಣದಲ್ಲಿ ಹೋಮ, ಹವನಾದಿಗಳು ಮತ್ತು ವಿಶೇಷ ಪೂಜೆಗಳು ನಡೆದವು. ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಕರ ಸಂಕ್ರಾಂತಿ ಸಮಯದಲ್ಲಿ ನಡೆಯುವ ಜಾತ್ರೆಯಲ್ಲಿ ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬರುತ್ತಿತ್ತು. ಆದರೆ, ಈ ಬಾರಿ ಕೊರೊನಾ ಕರಿನೆರಳಿನಿಂದಾಗಿ ಜಾತ್ರೆಯನ್ನು ನಿಷೇಧಿಸಿ ಹೆಚ್ಚು ಭಕ್ತರು ಸೇರುವುದಕ್ಕೆ ಕಡಿವಾಣ ಹಾಕಲಾಗಿತ್ತು. ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿದ ಆಡಳಿತ ಮಂಡಳಿಯು ಸರಳವಾಗಿ ಜಾತ್ರೆಯನ್ನು ಆಚರಣೆ ಮಾಡಿದೆ. ಕುಟುಂಬಸ್ಥರೊಂದಿಗೆ ಆಡಳಿತ ಮಂಡಳಿಯ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು.