ಸಾಗರ: ಅಡಿಕೆ (Adike) ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುದನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಮುಂದಿನ 15 ದಿನದಲ್ಲಿ ನಗರದಲ್ಲಿ 15ಕ್ಕೂ ಹೆಚ್ಚು ವಿಜ್ಞಾನಿಗಳು ಹಾಗೂ ಸಂಶೋಧಕರ ಸಮಾಲೋಚನಾ ಸಭೆ ಆಯೋಜನೆಗೆ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ತೀರ್ಮಾನಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಂಘದ ಕಚೇರಿಯಲ್ಲಿ ಇತ್ತೀಚೆಗೆ ಪೂರ್ವಭಾವಿ ಸಭೆ ನಡೆಸಿದ ಪದಾಧಿಕಾರಿಗಳು, ಶ್ರೀಲಂಕಾದಲ್ಲಿ ಈಚೆಗೆ ನಡೆದ 15 ದೇಶಗಳ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಅಡಕೆ ಹಾನಿಕಾರಕ ಎಂದು ಪ್ರತಿಪಾದಿಸಿದೆ ಎಂಬ ವರದಿ ಕೆಲ ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಇದರಿಂದ ಅಡಿಕೆ ಬೆಳೆಗಾರರು ವಿಚಲಿತರಾಗಿದ್ದಾರೆ. ಈ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಸೇರಿ ನ್ಯಾಯಾಲಯಗಳಿಗೂ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಈ ಸಮಾಲೋಚನಾ ಸಭೆ ಮಹತ್ವದಾಗಲಿದೆ ಎಂದು ಸಂಘದ ಅಧ್ಯಕ್ಷ ವ.ಶಂ. ರಾಮಚಂದ್ರ ಭಟ್ ಸಭೆಯಲ್ಲಿ ಅಭಿಪ್ರಾಯಪಟ್ಟರು.
2017ರಲ್ಲಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾದ ಕೇಶವ ಭಟ್ ಅವರ ಅಂತಾರಾಷ್ಟ್ರೀಯ ಸಂಶೋಧನಾ ಪ್ರಬಂಧದಲ್ಲಿ ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬ ವರದಿಯನ್ನು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಚೀನಾದ ಒಂದು ಸಂಶೋಧನಾ ವರದಿಯಲ್ಲಿಯೂ ಅಡಿಕೆ ಬೆಳೆಗಾರರಿಗೆ ಪೂರಕವಾದ ಅಂಶಗಳು ಅಡಕವಾಗಿರುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಕೃಷಿ ವಿಜ್ಞಾನಿಗಳಾದ ವಿಪ್ಪೇಶ್ ಮಂಚಾಲೆ, ಆತ್ರೇಯ ಜಗದೀಶ್, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ಮಾಜಿ ಅಧ್ಯಕ್ಷ ಎಲ್.ಟಿ.ತಿಮ್ಮಪ್ಪ, ಯು.ಹೆಚ್. ರಾಮಪ್ಪ, ಮಂಜುನಾಥ ಕಟ್ಟಿನಕೆರೆ, ಶಿವರಾಂ ಕಂಚಿ ಮೂಡಗೋಡು ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ » ಅಡಿಕೆ ಧಾರಣೆ | 5 ನವೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
Adike
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






