NEWS HIGHLIGHTS
ಸಾಗರ: ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಸಾಗರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಬೆಳಿಗ್ಗೆ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ತಪಾಸಣೆ ನಡೆಸಿತು.
ನ್ಯಾಯಾಲಯದ ಕಚೇರಿಗಳು, ಕೊಠಡಿಗಳು ಹಾಗೂ ಆವರಣದ ಮೂಲೆ ಮೂಲೆಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಿದರು. ದಿಢೀರ್ ತಪಾಸಣೆಯಿಂದಾಗಿ ನ್ಯಾಯಾಲಯದ ಸಿಬ್ಬಂದಿ ಮತ್ತು ವಕೀಲರಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

ರಾಜ್ಯದ ವಿವಿಧ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಪದೇ ಪದೆ ಹುಸಿ ಬಾಂಬ್ ಬೆದರಿಕೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ನ್ಯಾಯಾಲಯಗಳ ಭದ್ರತೆ ಹೆಚ್ಚಿಸಲು ಸೂಚನೆ ನೀಡಿದ್ದಾರೆ.