ಸರಣಿ ಅಪಘಾತ, ಎರಡು ಕಾರುಗಳು ಜಖಂ, ಚಕ್ರದಡಿ ಸಿಲುಕಿದ ಬೈಕ್, ಬಸ್ಸಿನ ಗಾಜು ಪೀಸ್ ಪೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGARA | ಕಾರುಗಳು, ಬೈಕ್ ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ (SERIAL ACCIDENT) ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಸಾಗರ ತಾಲೂಕು ಕುಗ್ವೆ ಕ್ರಾಸ್ ಬಳಿ ಸಂಜೆ ಘಟನೆ ಸಂಭವಿಸಿದೆ. ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ.

ಹೇಗಾಯ್ತು ಆಪಘಾತ? (SERIAL ACCIDENT)

ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ (SERIAL ACCIDENT). ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯಲ್ಲಿ ವ್ಯಾಗನಾರ್ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಡಿ ಸಿಲುಕಿ ಬೈಕ್ ಜಖಂ ಆಗಿದೆ. ಮತ್ತೊಂದು ಕಾರಿಗೂ ದೊಡ್ಡ ಮಟ್ಟದ ಹಾನಿಯಾಗಿದೆ. ಬಸ್ಸಿನ ಮುಂಭಾಗ ಜಖಂ ಆಗಿದ್ದು, ಗಾಜು ಪುಡಿಯಾಗಿದೆ.

ಸಾಗರ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಪ್ರವೀಣ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಸುಜತಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಹಿನ್ನೆಲೆ ಕುಗ್ವೆ ಕ್ರಾಸ್ ನಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯವಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಸಿಸಿಟಿವಿ ಕಿತ್ತು ಹಾಕಿ, 10 ಕ್ವಿಂಟಾಲ್ ಅಡಕೆ ಕಳ್ಳತನ, 26 ಜನರ ವಿರುದ್ಧ ಕೇಸ್

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 29, 2022

Leave a Comment