ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019
ಶರಾವತಿ ಭೂಗರ್ಭ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಸಂಸದ ಮತ್ತು ಶಾಸಕರ ಮೇಲೆ ಒತ್ತಡ ಹೇರಲು ಶರಾವತಿ ಉಳಿಸಿ ಹೋರಾಟ ಸಮಿತಿ ತೀರ್ಮಾನಿಸಿದೆ.
ಹೋರಾಟ ಸಮಿತಿ ಗೌರವ ಅಧ್ಯಕ್ಷರಾದ ನಾ.ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಸಾಗರದ ಸರ್ಕಾರಿ ನೌಕರರ ಭವನದಲ್ಲಿ ಇವತ್ತು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರ ಶರಾವತಿ ಭೂಗರ್ಭ ಯೋಜನೆ ಕೈಗೆತ್ತಿಕೊಳ್ಳಲು ಚಿಂತಿಸಿದೆ. ಯೋಜನೆಯನ್ನು ಕೂಡಲೆ ಕೈಬಿಡಬೇಕು. ಇದಕ್ಕಾಗಿ ಸಾಗರ ಶಾಸಕ ಮತ್ತು ಶಿವಮೊಗ್ಗ ಸಂಸದರನ್ನು ಭೇಟಿಯಾಗಿ ಒತ್ತಡ ಹೇರಲು ನಿರ್ಧರಿಸಲಾಗಿದೆ.
ಮತ್ತೊಂದೆಡೆ ಶರಾವತಿ ಕೊಳ್ಳ ಭೂಗರ್ಭ ಜಲವಿದ್ಯುತ್ ಯೋಜನೆಯಿಂದ ಆಗಬಹುದಾದ ಅನಾಹುತ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗದಲ್ಲಿ ಅಧ್ಯಯನ ಶಿಬಿರ ನಡೆಸಲು ಯೋಜಿಸಲಾಗಿದೆ. ಇನ್ನು ಈ ಯೋಜನೆಯ ಪರಿಣಾಮಗಳ ಕುರಿತು ಪ್ರತಿ ತಾಲೂಕಿನಲ್ಲಿ ಜಾಗೃತಿ ಮೂಡಲು ತೀರ್ಮಾನಿಸಲಾಯಿತು.
ರದ್ಧತಿ ಆದೇಶಕ್ಕೆ ಆಗ್ರಹ
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ಸರ್ಕಾರದ ವತಿಯಿಂದ ಹೇಳಿಕೆ ನೀಡಲಾಗಿದೆ. ಇದನ್ನು ಆದೇಶ ರೂಪದಲ್ಲಿ ನೀಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ಶಾಸಕ ಹಾಲಪ್ಪ ಮತ್ತು ಸಂಸದರನ್ನು ಭೇಟಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಒಕ್ಕೂಟದ ಸಂಚಾಲಕುರುಗಳಾದ ಎಚ್.ಬಿ. ರಾಘವೇಂದ್ರ, ಅಖಿಲೇಶ್ ಚಿಪ್ಪಳಿ, ಜಯರಾಂ, ಜಮೀಲ್ ಮತ್ತಿತರು ಸಭೆಯಲ್ಲಿ ಹಾಜರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422