ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 MARCH 2023
SHIMOGA : ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮಾರ್ಚ್ 18ರಂದು ಗ್ರಾಮ ವಾಸ್ತವ್ಯ (Grama Vastavya) ಮಾಡಲಿದ್ದಾರೆ. ಸಾಗರ ತಾಲೂಕು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಲಿದ್ದು, ವಾಸ್ತವ್ಯ ಮಾಡಲಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ನಡೆಯಲಿದೆ. ಕಂದಾಯ ಇಲಾಖೆ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಜನರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗ್ರಾಮಸ್ಥರು ಮುಂಚಿತವಾಗಿ ತಮ್ಮ ಅಹವಾಲುಗಳನ್ನು ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್. ಬಿರಾದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮೈಸೂರಿನಲ್ಲೂ VISL ಪರ ಧರಣಿ, ರಾಜ ಮನೆತನದ ಗಮನ ಸೆಳೆಯಲು ಯತ್ನ, ಕಾರಣವೇನು?