SHIVAMOGGA LIVE NEWS, 2 JANUARY 2025
ಶಿವಮೊಗ್ಗ ಲೈವ್ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ : ಜ.18ರಂದು ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದ ಷೋಕಾರ್ಡ್ (Show Card) ಬಿಡುಗಡೆ ಮಾಡಲಾಯಿತು. ಖಾಸಗಿ ಬಸ್ ಸ್ಟಾಂಡ್ ಆವರಣದಲ್ಲಿರುವ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಕಚೇರಿಯಲ್ಲಿ ತೋಟಗಾರ್ಸ್ ಅಧ್ಯಕ್ಷ ಕೆ.ಸಿ.ದೇವಪ್ಪ ಷೋಕಾರ್ಡ್ ಬಿಡುಗಡೆ ಮಾಡಿದರು.
ಸಮಾವೇಶದಲ್ಲಿ ಅಡಿಕೆ ಬೆಳೆಗಾರರು, ಕೃಷಿ ಕಾರ್ಮಿಕರು, ಅವಲಂಬಿತರೆಲ್ಲ ಭಾಗವಹಿಸಬೇಕು. ಪಕ್ಷಾತೀತ, ಜಾತ್ಯಾತೀತವಾಗಿ ಸಮಾವೇಶ ನಡೆಬೇಕು. 25 ಸಾವಿರ ಜನರನ್ನು ಸಮಾವೇಶಕ್ಕೆ ಸೇರಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊರಬೇಕು. – ಟಿ.ಡಿ.ಮೇಘರಾಜ್, ಬಿಜೆಪಿ ಜಿಲ್ಲಾಧ್ಯಕ್ಷ

ಅಡಿಕೆ ಬೆಳೆಯ ಮೇಲೆ ತೂಗುಗತ್ತಿ ಇದೆ. ಅಡಿಕೆ ಬೆಳೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತಹ ನಿರ್ಣಯಗಳನ್ನು ಸಮಾವೇಶದಲ್ಲಿ ಕೈಗೊಳ್ಳಬೇಕಿದೆ. ಅಡಿಕೆ ಬೆಳೆಯನ್ನು ಪ್ರತಿನಿಧಿಸುವ ಎಲ್ಲ ಸಹಕಾರ ಸಂಘಗಳು ಸಮಾವೇಶಕ್ಕೆ ಕೈ ಜೋಡಿಸಿವೆ. – ಬಿ.ಎ.ಇಂದೂಧರ ಬೇಸೂರು, ಆಪ್ಸ್‌ಕೋಸ್ ಅಧ್ಯಕ್ಷ

ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ » ಅಡಿಕೆ ಧಾರಣೆ | 1 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





